ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಾಲಿ ಪ್ರಕರಣ: ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಸಿಬಿಐ ತನಿಖೆಗೆ ನೀಡಲು ಸಿದ್ಧ: ಗೋವಾ ಸಿ.ಎಂ ಪ್ರಮೋದ್ ಸಾವಂತ್
Last Updated 28 ಆಗಸ್ಟ್ 2022, 11:13 IST
ಅಕ್ಷರ ಗಾತ್ರ

ಪಣಜಿ: ಸೋನಾಲಿ ಫೋಗಾಟ್ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಗೋವಾ ನ್ಯಾಯಾಲಯವು ಭಾನುವಾರ ಐದು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೋವಾದ ಕರ್ಲೀಸ್ ರೆಸ್ಟೊರೆಂಟ್‌ನ ಮಾಲೀಕ ಎಡ್ವಿನ್ ನೂನೆಸ್ ಹಾಗೂ ಇಬ್ಬರು ಡ್ರಗ್ ಪೆಡ್ಲರ್‌ಗಳಾದ ದತ್ತಪ್ರಸಾದ್ ಗಾಂವ್ಕರ್ ಮತ್ತು ರಮಾಕಾಂತ್ ಮಾಂಡ್ರೇಕರ್ ಅವರನ್ನು ಪೊಲೀಸರು ಪಣಜಿಯಲ್ಲಿರುವ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ಬಳಿಕ ನ್ಯಾಯಾಲಯವು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿತು.

ಎಡ್ವಿನ್ ಅವರು ಜಾಮೀನು ಅರ್ಜಿಯನ್ನು ಸಲ್ಲಿಸಿದರಾದರೂ ನ್ಯಾಯಾಲಯವು ಅರ್ಜಿಯನ್ನು ತಿರಸ್ಕರಿಸಿತು.

ಮತ್ತೊಬ್ಬ ಡ್ರಗ್ ಪೆಡ್ಲರ್ ಬಂಧನ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾದ ಪೊಲೀಸರು ಮತ್ತೊಬ್ಬ ಡ್ರಗ್ ಪೆಡ್ಲರ್‌ನನ್ನು ಬಂಧಿಸಿದ್ದಾರೆ. ಇದರಿಂದಾಗಿ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ ಐದಕ್ಕೆ ಏರಿದಂತಾಗಿದೆ.

ಸಿಬಿಐಗೆ ನೀಡಲು ಸಿದ್ಧ: ‘ಸೋನಾಲಿ ಫೋಗಾಟ್ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಲು ಗೋವಾ ಸರ್ಕಾರ ಸಿದ್ಧವಿದೆ’ ಎಂದು ಅಲ್ಲಿನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭಾನುವಾರ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಪ್ರಕರಣದ ತನಿಖೆಯನ್ನು ವಿವರವಾಗಿ ನಡೆಸಬೇಕೆಂದು ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಫೋಗಾಟ್ ಕುಟುಂಬದವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಯಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT