ಪಣಜಿ: ಗೋವಾದಲ್ಲಿ ಸೋಮವಾರ ರಾತ್ರಿ ನಿಧನರಾದ ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್ ಅವರ ದೇಹದಲ್ಲಿ ಗಾಯಗಳಾಗಿರುವುದು ಮರಣೋತ್ತರ ಪರೀಕ್ಷೆ ವೇಳೆ ಗೊತ್ತಾಗಿದೆ. ಹೀಗಾಗಿ ಅವರ ಇಬ್ಬರು ಸಹಚರರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಆಗಸ್ಟ್ 22ರಂದು ಫೋಗಟ್ ಗೋವಾಕ್ಕೆ ಬಂದಾಗ ಅವರ ಜತೆ ಸುಧೀರ್ ಸಾಂಗ್ವಾನ್ ಹಾಗೂ ಸುಖ್ವಿಂದರ್ ವಾಸಿ ಎಂಬವರು ಇದ್ದರು. ಇವರಿಬ್ಬರನ್ನು ಆರೋಪಿಗಳೆಂದು ಪರಿಗಣಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್ ಗೋವಾದಲ್ಲಿ ನಿಧನ

ಫೋಗಟ್ ಸಹೋದರ ರಿಂಕು ಧಾಕ ಅವರು ಅಂಜುನಾ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಿಸಿದ್ದರು. ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಗುರುವಾರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

42 ವರ್ಷ ವಯಸ್ಸಿನ ಫೋಗಟ್ ಸೋಮವಾರ ರಾತ್ರಿ ಗೋವಾದಲ್ಲಿ ಮೃತಪಟ್ಟಿದ್ದರು. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಆರಂಭದಲ್ಲಿ ಗೋವಾ ಡಿಜಿಪಿ ಜಸ್‌ಪಾಲ್ ಸಿಂಗ್ ತಿಳಿಸಿದ್ದರು. ಆದರೆ, ಬಳಿಕ ಫೋಗಟ್ ಅವರ ಕುಟುಂಬದವರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು.

ಹರಿಯಾಣ ಚುನಾವಣೆ: ಹೆಚ್ಚು ಶೋಧ ನಡೆದಿದ್ದು ಟಿಕ್ಟಾಕ್ ನಟಿ ‘ಸೊನಾಲಿ’ಗೆ!

ಸೊನಾಲಿ ಫೋಗಟ್ 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‌ದೀಪ್ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು. ಟಿಕ್ ಟಾಕ್‌ನಲ್ಲಿ ಜನಪ್ರಿಯರಾಗಿದ್ದ ಅವರು, 14ನೇ ಆವೃತ್ತಿಯ ‘ಬಿಗ್‌ಬಾಸ್’ ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.