ನವದೆಹಲಿ: ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರನ್ನು ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಭಾನುವಾರ ತಿಳಿಸಿವೆ.
ಸೋನಿಯಾ ಅವರನ್ನು ಶನಿವಾರ ಸಂಜೆ ಕೇಂದ್ರ ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪ್ರಮಾಣದ ಜ್ವರವಿದೆ. ವೈದ್ಯರ ತಂಡ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಹಿರಿಯ ವೈದ್ಯರೊಬ್ಬರು ಸುದ್ಧಿಸಂಸ್ಥೆಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.