ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ನಗರದ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಸೋನಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದಾರೆ ಎಂದು ಮೂಲಗಳು ಹೇಳಿವೆ.

ಸೋನಿಯಾ ಗಾಂಧಿ ಅವರು ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮಂಗಳವಾರದಿಂದ ಸೋನಿಯಾ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿಯೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಸಂಜೆ ಉತ್ತರ ಪ್ರದೇಶ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆಯಲ್ಲಿ ಏಳು ಕಿಲೋಮೀಟರ್ ನಡೆದು ನಂತರ ತುರ್ತಾಗಿ ದೆಹಲಿಗೆ ಮರಳಿದ್ದಾರೆ ಎಂದು ಮೂಲಗಳು ಹೇಳಿವೆ.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ಉತ್ತರ ಪ್ರದೇಶದ ಬಾಗ್‌ಪತ್‌ನ ಮಾವಿಕಲನ್‌ನಿಂದ ಬುಧವಾರ ಬೆಳಿಗ್ಗೆ ತನ್ನ ಪ್ರಯಾಣವನ್ನು ಪುನರಾರಂಭಿಸಿತು.

ಆದರೆ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಯಾತ್ರೆಗೆ ಬರಲಿಲ್ಲ. ಸೋನಿಯಾ ಆರೋಗ್ಯ ಸುಧಾರಣೆ ಬಳಿಕ ರಾಹುಲ್ ಯಾತ್ರೆ ಸೇರಿಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.