ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಷನಲ್ ಹೆರಾಲ್ಡ್: ಇ.ಡಿ ಮುಂದೆ 3ನೇ ಸುತ್ತಿನ ವಿಚಾರಣೆಗಾಗಿ ಸೋನಿಯಾ ಹಾಜರು

ಅಕ್ಷರ ಗಾತ್ರ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಮೂರನೇ ಸುತ್ತಿನ ವಿಚಾರಣೆಗಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಬುಧವಾರ ಹಾಜರಾಗಿದ್ದಾರೆ.

ಬುಧವಾರ ಬೆಳಿಗ್ಗೆ 11ರ ಸುಮಾರಿಗೆ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಸೋನಿಯಾ, ದೆಹಲಿಯ ಇ.ಡಿ. ಕಚೇರಿಗೆ ಆಗಮಿಸಿದರು.

ಮಂಗಳವಾರ ಸುಮಾರು ಆರು ತಾಸು ವಿಚಾರಣೆ ಎದುರಿಸಿದ್ದ ಸೋನಿಯಾ ಅವರಿಗೆ ಬುಧವಾರ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ಸೂಚಿಸಿದ್ದರು.

ಸೋನಿಯಾ ಅವರಿಗೆ ಆರೋಗ್ಯ ಸಮಸ್ಯೆ ಇದ್ದಿದ್ದರಿಂದ ಪ್ರಿಯಾಂಕಾ ಗಾಂಧಿ ಜೊತೆಗೆ ತೆರಳಿದ್ದರು. ಅಲ್ಲದೆ ಪ್ರತ್ಯೇಕ ಕೊಠಡಿಯಲ್ಲಿ ಇದ್ದರು.

ಇನ್ನೊಂದೆಡೆ ಬಿಜೆಪಿಯಿಂದ ಇ.ಡಿ ದುರ್ಬಳಕೆ ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರವೂ ದೇಶದಾದ್ಯಂತ ಪ್ರತಿಭಟನೆ ಮುಂದುವರಿಸಿದ್ದಾರೆ.

75 ವರ್ಷದ ಸೋನಿಯಾ ಗಾಂಧಿ ಅವರನ್ನು ಇ.ಡಿ ಅಧಿಕಾರಿಗಳು ಇದುವರೆಗೆ ಎಂಟು ತಾಸು ವಿಚಾರಣೆಗೆ ಒಳಪಡಿಸಿದ್ದು, 65ರಿಂದ 70 ಪ್ರಶ್ನೆಗಳನ್ನು ಕೇಳಿದ್ದಾರೆ.ಇಂದು ಕೂಡ 30ರಿಂದ 40 ಪ್ರಶ್ನೆಗಳನ್ನು ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT