ನವದೆಹಲಿ:ಮೋದಿ ಸರ್ಕಾರ ತನ್ನದೇ ಜನರ ಮೇಲೆ ಯುದ್ಧ ಸಾರಿದೆ ಎಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಾಡಿರುವ ಆರೋಪಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತಿರುಗೇಟು ನೀಡಿದ್ದಾರೆ. ಸೋನಿಯಾ ಗಾಂಧಿ ರಾಜಕೀಯ ಲಾಭಕ್ಕಾಗಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ದೆಹಲಿಯ ಕೇಂದ್ರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿತ್ತು. ಆ ಸಂದರ್ಭದಲ್ಲಿ ಪೊಲೀಸರು ವಿಶ್ವವಿದ್ಯಾಲಯಕ್ಕೆ ನುಗ್ಗಿದ್ದರು ಎಂದೂ ನಿರ್ಮಲಾ ಹೇಳಿದ್ದಾರೆ.

ಸೋನಿಯಾ ಅವರು ಸರ್ಕಾರದ ಬಗ್ಗೆ ನೀಡಿರುವ ಹೇಳಿಕೆ ಬೇಜವಾಬ್ದಾರಿ ಮತ್ತು ಪ್ರಚೋದನೆಯಿಂದ ಕೂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಜಾಮಿಯಾ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ದೇಶದೆಲ್ಲೆಡೆ ಆಕ್ರೋಶ

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮ ಕೈಗೊಂಡ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದ ಸೋನಿಯಾ, ಬಿಜೆಪಿ ಸರ್ಕಾರ ತನ್ನದೇ ಜನರ ಮೇಲೆ ಯುದ್ಧ ಸಾರಿದೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ‘ಧ್ರುವೀಕರಣದ ಲಿಪಿಕಾರರು’ ಎಂದು ಟೀಕಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.