ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದಾರೆ. ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಜೊತೆಗೆ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಆದರೆ ಯಾವಾಗ ಹೋಗುತ್ತಿದ್ದಾರೆ ಅಥವಾ ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್ 4ರಂದು ರಾಹುಲ್ ಗಾಂಧಿ ಅವರು 'ಮೆಹಂಗಾಯಿ ಪರ್ ಹಲ್ಲಾ ಬೋಲ್' ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು ತಿಳಿಸಿದ್ದಾರೆ.

'ವೈದ್ಯಕೀಯ ಪರೀಕ್ಷೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವಿದೇಶಕ್ಕೆ ತೆರಳಲಿದ್ದಾರೆ. ನವದೆಹಲಿಗೆ ವಾಪಸ್ ಆಗುವ ಮುನ್ನ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ಭೇಟಿ ಮಾಡಲಿದ್ದಾರೆ. ಸೋನಿಯಾ ಅವರ ಜೊತೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಹೋಗುತ್ತಿದ್ದಾರೆ. ಸೆಪ್ಚೆಂಬರ್ 4ರಂದು 'ಮೆಹಂಗಾಯಿ ಪರ್ ಹಲ್ಲಾ ಬೋಲ್' ಅಭಿಯಾನವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ' ಎಂದು ಜೈರಾಮ್ ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ನಡುವೆ ಕಾಂಗ್ರೆಸ್ ಪಕ್ಷವು ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ 'ಭಾರತ್ ಜೋಡೊ ಯಾತ್ರಾ' ಅಭಿಯಾನದ ಸಿದ್ಧತೆಯಲ್ಲಿದೆ. ಸೆಪ್ಚೆಂಬರ್ 7ಕ್ಕೆ ಭಾರತವನ್ನು ಜೋಡಿಸುವ ಘೋಷಣೆಯನ್ನು ಹೊತ್ತಿರುವ ಅಭಿಯಾನ ಆರಂಭಗೊಳ್ಳಲಿದೆ. ಪಕ್ಷದ ಅಧ್ಯಕ್ಷೀಯ ಚುನಾವಣೆ ದಿನಾಂಕವೂ ಈ ವಾರ ಘೋಷಣೆಯಾಗುವ ಸಾಧ್ಯತೆ ಇದೆ.

ಭಿನ್ನಾಭಿಪ್ರಾಯ ಮರೆತು ಒಂದಾಗಿ: ಶರದ್ ಪವಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.