ಶಿಮ್ಲಾ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಅಧಿಕ ರಕ್ತದೊತ್ತಡದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಶನಿವಾರ ಬೆಳಗ್ಗೆ ಇಲ್ಲಿನ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ತಪಾಸಣೆ ಮತ್ತು ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದರು ಎಂದು ಹಿಮಾಚಲದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ನರೇಶ್ ಚೌಹಾಣ್ ತಿಳಿಸಿದ್ದಾರೆ.

ಮಗಳು ಪ್ರಿಯಾಂಕಾ ಗಾಂಧಿ ಅವರೊಂದಿಗೆ ಶಿಮ್ಲಾಗೆ ಸೋನಿಯಾ ಗಾಂಧಿ ಪ್ರವಾಸಕ್ಕೆ ಬಂದಿದ್ದರು. ಇಲ್ಲಿನ ಹೊರ ವಲಯದಲ್ಲಿರುವ ಪ್ರಿಯಾಂಕ ಅವರ ನಿವಾಸದಲ್ಲಿ ತಂಗಿದ್ದರು.

78 ವರ್ಷದ ಸೋನಿಯಾ ಗಾಂಧಿ ಅವರಿಗೆ ರಕ್ತದೊತ್ತಡ ಹೆಚ್ಚಾಗಿತ್ತು, ಚಿಕಿತ್ಸೆ ನೀಡಿದ ಬಳಿಕ ಸಾಮಾನ್ಯವಾಗಿದೆ ಎಂದು ಉಪ ವೈದ್ಯಕೀಯ ಅಧೀಕ್ಷಕ ಡಾ. ಅಮನ್ ಹೇಳಿದ್ದಾರೆ.

ಈಗ ಸೋನಿಯಾ ಗಾಂಧಿ ಪ್ರಿಯಾಂಕ ಅವರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.