ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾಗಾಂಧಿ ಸ್ಪರ್ಧೆ?

Published 13 ಫೆಬ್ರುವರಿ 2024, 0:30 IST
Last Updated 13 ಫೆಬ್ರುವರಿ 2024, 0:30 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ, ಬಹುತೇಕ ರಾಜಸ್ಥಾನದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಆದರೆ, ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್‌ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿವೆ. 

ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದಾರೆ. ದಕ್ಷಿಣ ರಾಜ್ಯಗಳ ಘಟಕಗಳಿಂದಲೂ ಸ್ಪರ್ಧಿಸಲು ಬೇಡಿಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ. 

ಆದರೆ, ಸೋನಿಯಾ ಅಥವಾ ಪಕ್ಷದ ನಾಯಕತ್ವವು ಕರ್ನಾಟಕ ಅಥವಾ ತೆಲಂಗಾಣದಿಂದ ಸ್ಪರ್ಧೆ ಕುರಿತು ಆಸಕ್ತಿ ಹೊಂದಿಲ್ಲ ಎಂದು ತಿಳಿಸಿವೆ.

ರಾಜಸ್ಥಾನದಿಂದಲೇ ಸ್ಪರ್ಧಿಸುವ ಸಾಧ್ಯತೆಗಳು ಹೆಚ್ಚಿವೆ ಎಂದು ಮೂಲಗಳು ತಿಳಿಸಿವೆ. ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಆ ಕ್ಷೇತ್ರವನ್ನು ಬಳಿಕ ಪುತ್ರ ರಾಹುಲ್‌ಗಾಂಧಿ ಅವರಿಗೆ ಬಿಟ್ಟಿದ್ದರು. ಸದ್ಯ, ರಾಯ್‌ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪುತ್ರಿ ಪ್ರಿಯಾಂಕಾಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಎರಡು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳು

ನವದೆಹಲಿ: ರಾಜಸ್ಥಾನದಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಬಿಜೆಪಿಯು ಗುರುವಾರ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಚುನ್ನಿಲಾಲ್‌ ಗರಸಿಯಾ ಮತ್ತು ಮದನ್‌ ರಾಥೋಡ್ ಅವರಿಗೆ ಟಿಕೆಟ್‌ ಪ್ರಕಟಿಸಲಾಗಿದೆ.

ಹಾಲಿ ಸದಸ್ಯ, ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರನ್ನು ಕೈಬಿಡಲಾಗಿದೆ. ರಾಜ್ಯಸಭೆಯ ಸ್ಥಾನಗಳಿಗೆ ಫೆಬ್ರುವರಿ 27ರಂದು ಚುನಾವಣೆ ನಡೆಯಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT