ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್: ವಿಶ್ವಾಸಮತ ಸಾಬೀತುಪಡಿಸಿದ ಸಿಎಂ ಹೇಮಂತ್ ಸೊರೇನ್

Last Updated 5 ಸೆಪ್ಟೆಂಬರ್ 2022, 8:31 IST
ಅಕ್ಷರ ಗಾತ್ರ

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ರಾಜ್ಯ ವಿಧಾನಸಭೆಯಲ್ಲಿ ಸೋಮವಾರ ವಿಶ್ವಾಸಮತ ಗೆದ್ದಿದ್ದಾರೆ.

ಸಿಎಂ ಸೊರೇನ್ ಮಂಡಿಸಿದ ವಿಶ್ವಾಸಮತ ನಿರ್ಣಯವನ್ನು ಜಾರ್ಖಂಡ್ ವಿಧಾನಸಭೆ ಅಂಗೀಕರಿಸಿತು. ಈ ವೇಳೆ ಬಿಜೆಪಿ ಶಾಸಕರು ಗದ್ದಲದೊಂದಿಗೆ ಸಭಾತ್ಯಾಗ ನಡೆಸಿದರು.

81 ಸದಸ್ಯ ಬಲದ ವಿಧಾನಸಭೆಯಲ್ಲಿ ಸಿಎಂ ಹೇಮಂತ್ ಸೊರೇನ್ ಪರವಾಗಿ 48 ಮತಗಳು ಚಲಾವಣೆಯಾದವು.

ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸೊರೇನ್, ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುವ ಹಿನ್ನೆಲೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವುದು ಅನಿವಾರ್ಯವೆನಿಸಿತ್ತು ಎಂದು ಹೇಳಿದ್ದಾರೆ.

ಚುನಾವಣೆ ಗೆಲ್ಲಲು ಬಿಜೆಪಿ, ಗಲಭೆ ಹುಟ್ಟುಹಾಕುವ ಮೂಲಕ ದೇಶದಲ್ಲಿ ಆಂತರಿಕ ಕಲಹವನ್ನುಂಟು ಮಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT