ರಾಂಚಿ (ಪಿಟಿಐ): ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ನಿಕಟವರ್ತಿಯೊಬ್ಬರ ನಡುವಿನ ವಾಟ್ಸ್ಆ್ಯಪ್ ಸಂದೇಶದ ವಿವರಗಳನ್ನು ಜಾರಿ ನಿರ್ದೇಶನಾಲಯವು (ಇ.ಡಿ) ಹಣದ ಅಕ್ರಮ ವರ್ಗಾವಣೆ ತಡೆ ನ್ಯಾಯಾಲಯಕ್ಕೆ ಸಲ್ಲಿಸಿದೆ.

ರಾಜ್ಯ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆ ಬಗ್ಗೆ ಇದರಲ್ಲಿ ಚರ್ಚಿಸಲಾಗಿದೆ. ಭಾರಿ ಮೊತ್ತದ ಹಣದ ವಹಿವಾಟನ್ನು ಇದು ಒಳಗೊಂಡಿದೆ ಎಂದು ಆರೋಪಿಸಲಾಗಿದೆ.

ನ್ಯಾಯಾಲಯವು ಸೊರೇನ್ ಅವರನ್ನು ಇನ್ನೂ ಐದು ದಿನಗಳ ಮಟ್ಟಿಗೆ ಇ.ಡಿ. ವಶಕ್ಕೆ ಒಪ್ಪಿಸಿದೆ. ಸೊರೇನ್ ಅವರನ್ನು ಜನವರಿ 31ರಂದು ಬಂಧಿಸಲಾಗಿದೆ. ಸೊರೇನ್ ಅವರಿಗೆ ಸಂಬಂಧಿಸಿದ ಹಲವು ಆಸ್ತಿಗಳ ಬಗ್ಗೆ ವಿವರಗಳು ಲಭ್ಯವಾಗಿವೆ, ಆದರೆ ಅವುಗಳ ಬಗ್ಗೆ ಸೊರೇನ್ ಅವರು ಮಾಹಿತಿ ನೀಡುತ್ತಿಲ್ಲ ಎಂದು ಇ.ಡಿ. ಅಧಿಕಾರಿಗಳು ಕೋರ್ಟ್ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.