ನವದೆಹಲಿ: ಹದಿನೈದು ವರ್ಷಗಳ ಹಿಂದೆ ಟಿ.ವಿ ಪತ್ರಕರ್ತೆ ಸೌಮ್ಯ ಅವರನ್ನು ಹತ್ಯೆಗೈದ ಅಪರಾಧಿಗಳಿಗೆ ಶಿಕ್ಷೆಯ ಪ್ರಮಾಣವನ್ನು ನವದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ನ.25ಕ್ಕೆ(ಶುಕ್ರವಾರ) ಕಾಯ್ದಿರಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರವೀಂದ್ರ ಕುಮಾರ್ ಪಾಂಡೆ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ. ಅಪರಾಧಿಗಳು ಸಲ್ಲಿಸಿರುವ ಅಫಿಡವಿಟ್ಗಳ ಪರಿಶೀಲನೆ ಪೂರ್ಣಗೊಂಡಿಲ್ಲ ಎಂದು ಗಮನಿಸಿದ ನ್ಯಾಯಾಲಯ ನ. 7 ರಂದು ಪ್ರಕರಣವನ್ನು ಮುಂದೂಡಿತ್ತು.

ಪ್ರಕರಣದ ಹಿನ್ನೆಲೆ:

ಪತ್ರಕರ್ತೆ ಸೌಮ್ಯ ಅವರು, 2008ರ ಸೆ.30ರಂದು ಮುಂಜಾನೆ 3.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ತನ್ನ ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ದರೋಡೆ ಮಾಡುವ ಉದ್ದೇಶದಿಂದ ವಸಂತ ವಿಹಾರ್ ಬಳಿ ಕಾರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಅವರ ತಲೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದರು. ಈ ಕೃತ್ಯ ರಾಷ್ಟ್ರದಾದ್ಯಂತ ಸುದ್ದಿಯಾಗಿತ್ತು.

ಐವರು ದೋಷಿ:

2008ರಲ್ಲಿ ನಡೆದ ಸೌಮ್ಯ ವಿಶ್ವನಾಥನ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಐವರು ಆರೋಪಿಗಳನ್ನು ನವದೆಹಲಿಯ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿ 2023ರ ಅ.18ರಂದು ತೀರ್ಪು ನೀಡಿತ್ತು.

ರವಿಕಪೂರ್, ಅಮಿತ್ ಶುಕ್ಲಾ, ಬಲ್ಜೀತ್ ಮಲಿಕ್, ಅಜಿತ್ಕುಮಾರ್ ಹಾಗೂ ಅಜಯ್ ಸೇಥಿ ಅವರ ಮೇಲಿನ ಆರೋಪ ಸಾಬೀತಾಗಿದೆ. ಎಲ್ಲರೂ ದೋಷಿಗಳಾಗಿದ್ದಾರೆ ಎಂದು ಹೆಚ್ಚುವರಿ ನ್ಯಾಯಾಧೀಶ ರವೀಂದ್ರ ಕುಮಾರ್ ಪಾಂಡೆ ನ್ಯಾಯಾಲಯದಲ್ಲಿ ತೀರ್ಪು ಪ್ರಕಟಿಸಿದ್ದರು.
.ಪತ್ರಕರ್ತೆ ಸೌಮ್ಯ ಕೊಲೆ: ಐವರು ದೋಷಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.