ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಯಿಕ್ಕೋಡ್‌ನಲ್ಲಿ ಕೊರಿಯಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಪೊಲೀಸರಿಂದ ತನಿಖೆ

Last Updated 26 ಡಿಸೆಂಬರ್ 2022, 11:24 IST
ಅಕ್ಷರ ಗಾತ್ರ

ಕೊಚ್ಚಿ: ಕೋಯಿಕ್ಕೋಡ್‌ ವಿಮಾನ ನಿಲ್ದಾಣಕ್ಕೆ ಧಾವಂತದಲ್ಲಿ ಬಂದ ದಕ್ಷಿಣ ಕೊರಿಯಾದ ಮಹಿಳೆಯೊಬ್ಬರನ್ನು ವಿಚಾರಣೆ ನಡೆಸಿರುವ ಅಧಿಕಾರಿಗಳಿಗೆ ಆಘಾತಕಾರಿ ಸಂಗತಿಯೊಂದು ಗೊತ್ತಾಗಿದೆ. ದಾಖಲೆ ಪತ್ರಗಳನ್ನು ಕೇಳಿದ ಅಧಿಕಾರಿಗಳಿಗೆ ಮಹಿಳೆಯು ತಮ್ಮ ಮೇಲಿನ ಲೈಂಗಿಕ ದೌರ್ಜನ್ಯದ ಕುರಿತು ಮಾಹಿತಿ ನೀಡಿದ್ದಾರೆ.

ಮಹಿಳೆಯ ಬಳಿ ಸರಿಯಾದ ಪ್ರಯಾಣ ದಾಖಲೆಗಳಿಲ್ಲ ಎಂಬ ಕಾರಣಕ್ಕೆ ಅವರನ್ನು ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದರು.

ಪೊಲೀಸರು ವಿವರವಾದ ತನಿಖೆ ನಡೆಸಿದಾಗ, ಮಹಿಳೆ ಮಾನಸಿಕವಾಗಿ ಕುಗ್ಗಿರುವುದು ಗೊತ್ತಾಗಿದೆ. ನಂತರ ಸಮಾಧಾನಪಡಿಸಿ, ವೈದ್ಯಕೀಯ ಪರೀಕ್ಷೆ ನಡೆಸಿದಾಗ ಲೈಂಗಿಕ ದೌರ್ಜನ್ಯ ನಡೆದಿರುವುದು ಬಯಲಾಗಿದೆ.

ಕೋಯಿಕ್ಕೋಡ್‌ ನಗರದಲ್ಲಿ ಉಳಿದುಕೊಂಡಿದ್ದಾಗ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ವೈದ್ಯರಿಗೆ ತಿಳಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲೂ ಇದು ದೃಢವಾಗಿದೆ ಎನ್ನಲಾಗಿದೆ.

ಪೊಲೀಸರ ತನಿಖಾ ತಂಡವು ವೈದ್ಯರಿಂದ ಹೇಳಿಕೆಯನ್ನು ಪಡೆದುಕೊಂಡಿದೆ. ತನಿಖೆ ಕೈಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT