ನವದೆಹಲಿ (ಪಿಟಿಐ): ನೈರುತ್ಯ ಮುಂಗಾರು ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಕೇರಳವನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಮುನ್ಸೂಚನೆ ನೀಡಿದೆ.

ಸಾಮಾನ್ಯವಾಗಿ ನೈರುತ್ಯ ಮುಂಗಾರು ಜೂನ್ 1ರ ಆಸುಪಾಸಿನಲ್ಲಿ ಆರಂಭವಾಗುತ್ತದೆ.

ಅರಬ್ಬೀ ಸಮುದ್ರ, ಲಕ್ಷದ್ವೀಪ , ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಿಗೆ ಎರಡು–ಮೂರು ದಿನಗಳಲ್ಲಿ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಬಹುದು ಎಂದು ಈ ಹಿಂದೆ ಐಎಂಡಿ ಮುನ್ಸೂಚನೆ ನೀಡಿತ್ತು. ಎಲ್ ನಿನೊ ಪ್ರಭಾವದಿಂದಾಗಿ ನೈರುತ್ಯ ಮುಂಗಾರು ಮಳೆ ವಾಡಿಕೆಗಿಂತಲೂ ಕಡಿಮೆ ಇರಲಿದೆ ಎಂದು ಕಳೆದ ವಾರ ಹೇಳಿತ್ತು.

ಜೂನ್ನಲ್ಲಿ ಎಲ್ ನಿನೊ ಪ್ರಭಾವ ದುರ್ಬಲವಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್ನಲ್ಲಿ ಪ್ರಬಲವಾಗಬಹುದು ಎಂದು ಐಎಂಡಿ ಅಂದಾಜಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.