ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಭಾರತದಲ್ಲಿ ಸೆಪ್ಟೆಂಬರ್‌ ಅಂತ್ಯದವರೆಗೂ ಮಳೆ

Last Updated 16 ಸೆಪ್ಟೆಂಬರ್ 2021, 12:51 IST
ಅಕ್ಷರ ಗಾತ್ರ

ನವದೆಹಲಿ: ಈ ವರ್ಷ ಮುಂಗಾರು ಮತ್ತಷ್ಟು ವಿಸ್ತರಿಸಲಿದ್ದು, ಉತ್ತರ ಭಾರತದಲ್ಲಿ ಸೆಪ್ಟೆಂಬರ್‌ ಅಂತ್ಯದವರೆಗೂ ಮಳೆ ಕಡಿಮೆಯಾಗುವುದಿಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಭಾರತದಲ್ಲಿ ಮುಂದಿನ 10 ದಿನಗಳ ಕಾಲ ಮುಂಗಾರು ಕಡಿಮೆಯಾಗುವ ಲಕ್ಷಣಗಳಿಲ್ಲ ಎಂದು ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರಾ ತಿಳಿಸಿದ್ದಾರೆ.

ಸತತವಾಗಿ ಐದು ದಿನಗಳ ಕಾಲ ಮಳೆ ಸುರಿದರೆ ಮಾತ್ರ ನೈರುತ್ಯ ಮುಂಗಾರು ವಾಯವ್ಯ ಭಾರತದಲ್ಲಿ ಕ್ಷೀಣಿಸುವ ಸಾಧ್ಯತೆಗಳಿವೆ ಎಂದು ಅವರು ಹೇಳಿದ್ದಾರೆ.

ಮುಂಗಾರು ಹೆಚ್ಚು ದಿನಗಳ ಕಾಲ ಇದ್ದಷ್ಟು ಚಳಿಗಾಲವು ತಡವಾಗಿ ಆರಂಭವಾಗುತ್ತದೆ. ಸಾಮಾನ್ಯವಾಗಿ ನೈರುತ್ಯ ಮುಂಗಾರು ಮಳೆ ಕಡಿಮೆಯಾಗುವುದು ಪಶ್ಚಿಮ ರಾಜಸ್ಥಾನ ಪ್ರದೇಶದಿಂದ ಆರಂಭವಾಗುತ್ತದೆ. ಆದರೆ, ಪರಿಷ್ಕೃತ ಮಾಹಿತಿ ಅನ್ವಯ, ಜೈಸಲ್ಮೇರ್‌ನಿಂದ ಸೆಪ್ಟೆಂಬರ್‌ 17ರಿಂದ ನೈರುತ್ಯ ಮುಂಗಾರು ಕಡಿಮೆಯಾಗುವ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT