ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭಾ ಚುನಾವಣೆ: ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಕಣಕ್ಕೆ

Published 13 ಫೆಬ್ರುವರಿ 2024, 14:22 IST
Last Updated 13 ಫೆಬ್ರುವರಿ 2024, 14:22 IST
ಅಕ್ಷರ ಗಾತ್ರ

ಲಖನೌ: ಸಮಾಜವಾದಿ ಪಕ್ಷವು ಜಯಾ ಬಚ್ಚನ್ ಅವರನ್ನು ರಾಜ್ಯಸಭಾ ಚುನಾವಣೆಯಲ್ಲಿ ಮತ್ತೆ ಕಣಕ್ಕೆ ಇಳಿಸಿದೆ. ಜಯಾ ಅವರು ಉತ್ತರ ಪ್ರದೇಶ ವಿಧಾನಸಭೆಯಿಂದ ರಾಜ್ಯಸಭೆಗೆ ಮರು ಆಯ್ಕೆ ಕೋರಿ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ಜಯಾ ಅಲ್ಲದೆ, ಪಕ್ಷವು ಮಾಜಿ ಸಂಸದ ರಾಮ್‌ಜಿಲಾಲ್ ಸುಮನ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅಲೋಕ್ ರಂಜನ್ ಅವರನ್ನೂ ಉತ್ತರ ಪ್ರದೇಶ ವಿಧಾನಸಭೆಯಿಂದ ಕಣಕ್ಕೆ ಇಳಿಸಿದೆ. ಇವರು ಕೂಡ ನಾಮಪತ್ರವನ್ನು ಮಂಗಳವಾರ ಸಲ್ಲಿಸಿದ್ದಾರೆ.

ಜಯಾ ಅವರು ಈಗ ನಾಲ್ಕನೆಯ ಬಾರಿಗೆ ರಾಜ್ಯಸಭೆಯ ಸದಸ್ಯರಾಗಿದ್ದಾರೆ. ಐದನೆಯ ಅವಧಿಗೆ ಆಯ್ಕೆ ಕೋರಿ ನಾಮಪತ್ರ ಸಲ್ಲಿಸಲಿದ್ದಾರೆ.

ಸುಮನ್ ಅವರು ಫಿರೋಜಾಬಾದ್‌ ಕ್ಷೇತ್ರದಿಂದ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. ರಂಜನ್ ಅವರು ಎಸ್‌ಪಿ ನೇತೃತ್ವದ ಸರ್ಕಾರ ಇದ್ದಾಗ ಉತ್ತರ ಪ್ರದೇಶದ ಮುಖ್ಯ ಕಾರ್ಯದರ್ಶಿ ಆಗಿದ್ದರು. ರಾಜ್ಯಸಭೆಗೆ ಫೆಬ್ರುವರಿ 27ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT