ಬಲ್ಲಿಯಾ (ಉತ್ತರ ಪ್ರದೇಶ): ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ ಆರೋಪದ ಮೇಲೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಪ್ರಾದೇಶಿಕ ನಾಯಕನನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಇತರ 21 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಸಬ್ಇನ್ಸ್ಪೆಕ್ಟರ್ ವರುಣ್ ಕುಮಾರ್ ರಾಕೇಶ್ ಅವರು ಭೀಮಾಪುರ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಎಸ್ಪಿ ನಾಯಕ ಫತೇಹ್ ಬಹದ್ದೂರ್ ಯಾದವ್ ಅವರನ್ನು ಬಂಧಿಸಲಾಗಿದೆ. ಇತರ 21 ಅಪರಿಚಿತ ವ್ಯಕ್ತಿಗಳ ವಿರುದ್ಧ ಶನಿವಾರ ರಾತ್ರಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 20ರಂದು ಆರೋಪಿಗಳು ಸರ್ಕಾರಿ ಕಾಮಗಾರಿಗೆ ಅಡ್ಡಿಪಡಿಸಿ ರಸ್ತೆ ತಡೆ ನಡೆಸಿದ್ದಾರೆ. ಅಲ್ಲದೆ ಸಿಕರಿಯಾ ಕಾಲುವೆ ಬಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಪ್ರತಿಕೃತಿಯನ್ನು ಸುಟ್ಟು ಹಾಕಿದ್ದಾರೆ. ಜೊತೆಗೆ ಅವರ ವಿರುದ್ಧ ನಿಂದನೀಯ ಪದಗಳನ್ನು ಬಳಸಿದ್ದಾರೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆರೋಪಿ ಸಮಾಜವಾದಿ ಪಕ್ಷದ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಇತರ ಆರೋಪಿಗಳ ಬಂಧನಕ್ಕೆ ಹುಡುಕಾಟ ನಡೆಸಲಾಗುತ್ತಿದೆ ಎಂದು ಭೀಮಪುರ ಪೊಲೀಸ್ ಠಾಣೆ ಪ್ರಭಾರಿ ಮದನ್ ಲಾಲ್ ಪಟೇಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.