ನವದೆಹಲಿ: ಸಮಾಜವಾದಿ ಪಕ್ಷದ (ಎಸ್ಪಿ) ನಾಯಕ ಹಾಗೂ ಮಾಜಿ ಸಚಿವ ನಾರದ ರಾಯ್ ಸೋಮವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

ಸದ್ಯದಲ್ಲೆ ಅವರು ಬಿಜೆಪಿ ಸೇರುವರು ಎಂದು ಮಾಧ್ಯಮಗಳು ವರದಿ ಮಾಡಿವೆ.

ರಾಯ್ ಅವರು ಅಮಿತ್ ಶಾ ಜೊತೆಗಿರುವ ಪೋಟೊವನ್ನು ಹಂಚಿಕೊಂಡಿದ್ದಾರೆ. ಈ ಫೋಟೊದಲ್ಲಿ ಎಸ್ಪಿ ಮುಖಂಡರಾದ ಓಂ ಪ್ರಕಾಶ್, ಅರುಣ್ ಕೂಡ ಇದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಜಗತ್ತಿನಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ಬಡವರ ಸಬಲೀಕರಣ ಮತ್ತು ರಾಷ್ಟ್ರೀಯವಾದವನ್ನು ಬಲಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ಬೆಂಬಲ ಇದೆ ಜೈ ಶ್ರೀರಾಮ್‘ ಎಂದು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸೋಮವಾರ ಅವರು ಬಲಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದರು. ಈ ವೇಳೆ ಅಖಿಲೇಶ್ ಸಿಂಗ್ ಯಾದವ್ ಕೂಡ ಇದ್ದರು.

ಬಲಿಯಾದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ಬಿಜೆಪಿಯಿಂದ ನೀರಜ್ ಶೇಖರ್, ಎಸ್ಪಿಯಿಂದ ಸನಾತನ ಪಾಂಡೆ ಸ್ಪರ್ಧೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.