ಬರೇಲಿ (ಉತ್ತರಪ್ರದೇಶ): ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ನಾಯಕ ಸುಲ್ತಾನ್ ಬೇಗ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ನಾಯಕ ವೀರಪಾಲ್ ಸಿಂಗ್ ಅವರು ನೀಡಿದ ದೂರಿನ ಮೇರೆಗೆ ಸುಲ್ತಾನ್ ಬೇಗ್ ವಿರುದ್ಧ ಉತ್ತರ ಪ್ರದೇಶ ಜಿಲ್ಲೆಯ ಶೇರ್ಗಢ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಸೆಕ್ಷನ್ 353, 299 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಬೇಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಸಿಂಗ್ ಹೇಳಿದ್ದಾರೆ.

ಸಿಎಂ ಯೋಗಿ ನೇತೃತ್ವದ ರಾಜ್ಯ ಸರ್ಕಾರ ಮಹಾಕುಂಭಮೇಳವನ್ನು ‘ಸ್ಮಶಾನ ಸ್ಥಳ’ವನ್ನಾಗಿಸಿದೆ ಎಂದು ಆರೋಪಿಸಿ ಸುಲ್ತಾನ್ ಬೇಗ್ ಟೀಕಿಸಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು.

'ಯೋಗಿ ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತದಿಂದ ಆಗಾಗ್ಗೆ ಬೆಂಕಿ ಮತ್ತು ಕಾಲ್ತುಳಿತ ದುರಂತಗಳು ಸಂಭವಿಸಿ ಜನರ ಸಾವು–ನೋವುಗಳಿಗೆ ಕಾರಣವಾಗಿದೆ. ಸಮರ್ಪಕ ವ್ಯವಸ್ಥೆ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದ್ದು, ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ" ಎಂದು ಬೇಗ್ ವಿಡಿಯೊದಲ್ಲಿ ಹೇಳಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.