ಸುಲ್ತಾನಪುರ: ಬ್ರಾಹ್ಮಣ ಸಮಾಜದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಮಾಜವಾದಿ ಪಕ್ಷದ ವಕ್ತಾರ ರಾಜ್ಕುಮಾರ್ ಭಾಟಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ರಾಜ್ಕುಮಾರ್ ಭಾಟಿ ಅವರು ನವದೆಹಲಿಯಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಅದರಲ್ಲಿ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ನಿಂದನೀಯ ಮತ್ತು ಅವಮಾನಕರ ಭಾಷೆಯನ್ನು ಬಳಸಿದ್ದಾರೆ. ನಮ್ಮ ಸಮುದಾಯವನ್ನು ವೇಶ್ಯೆಗೆ ಹೋಲಿಸಿದ್ದಾರೆ. ಇದು ನಮ್ಮ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದೆ ಎಂದು ದೂರುದಾರ ತಿಳಿಸಿದ್ದಾರೆ.

ಈ ಹಿಂದೆ, ಗಾಜಿಯಾಬಾದ್ ಮತ್ತು ನೋಯ್ಡಾ ಪೊಲೀಸರು ಕೂಡ ಭಾಟಿ ವಿರುದ್ಧ ಇದೇ ರೀತಿಯ ಆರೋಪದ ಮೇಲೆ ಎಫ್ಐಆರ್ ದಾಖಲಾಗಿತ್ತು.

ಈ ಕುರಿತು ಸಮರ್ಥನೆ ನೀಡಿರುವ ರಾಜ್ಕುಮಾರ್ ಭಾಟಿ, ‘ಕಾರ್ಯಕ್ರಮವೊಂದರಲ್ಲಿ ಮಾಡಿದ ಭಾಷಣದ ವಿಡಿಯೊ ತುಣುಕನ್ನು ಇಟ್ಟುಕೊಂಡು ನನ್ನ ಮೇಲೆ ಪಿತೂರಿ ಮಾಡಲಾಗುತ್ತಿದೆ’ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.