ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಯಾಣ ಚುನಾವಣೆ: ಕಾಂಗ್ರೆಸ್‌ಗೆ ಎಸ್‌ಪಿ ಬೆಂಬಲ

Published : 16 ಸೆಪ್ಟೆಂಬರ್ 2024, 15:33 IST
Last Updated : 16 ಸೆಪ್ಟೆಂಬರ್ 2024, 15:33 IST
ಫಾಲೋ ಮಾಡಿ
Comments

ಲಖನೌ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು (ಎಸ್‌ಪಿ), ‘ಇಂಡಿಯಾ’ ಮೈತ್ರಿಯ ಭಾಗವಾದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದೆ. ಆದರೆ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಚಾರ ನಡೆಸುವ ಕುರಿತು ಯಾವುದೇ ತೀರ್ಮಾನವಾಗಿಲ್ಲ.

‘ಹರಿಯಾಣದಲ್ಲಿ 17 ಕ್ಷೇತ್ರ ಬಿಟ್ಟುಕೊಡಲು ಕಾಂಗ್ರೆಸ್‌ಗೆ ಕೇಳಿದ್ದೆವು. ಬಳಿಕ 5 ಕ್ಷೇತ್ರವನ್ನು ಕೇಳಿದೆವು. ಆದರೆ, ಕಾಂಗ್ರೆಸ್‌ ಒಪ್ಪಲಿಲ್ಲ’ ಎಂದು ಎಸ್‌ಪಿ ಹಿರಿಯ ನಾಯಕರೊಬ್ಬರು ತಿಳಿಸಿದರು.  

ಈಗ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷವು 20 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಅಲ್ಲಿ ಅಭ್ಯರ್ಥಿಗಳ ಪರವಾಗಿ ಅಖಿಲೇಶ್ ಯಾದವ್ ಅವರು ಪ್ರಚಾರ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT