ಬೆಂಗಳೂರು: ಬಾಹ್ಯಾಕಾಶದಲ್ಲಿ ಜೋಡಣೆ ಪ್ರಯೋಗಕ್ಕಾಗಿ ಉಡಾವಣೆ ಮಾಡಲಾಗಿರುವ ಎರಡು ಉಪಗ್ರಹಗಳನ್ನು ಮೂರು ಮೀಟರ್ ಅಂತರಕ್ಕೆ ತಂದು ಜೋಡಣೆಯ ಪ್ರಾಯೋಗಿಕ ಪ್ರಯತ್ನ ನಡೆಸಲಾಗಿದೆ. ಬಳಿಕ, ಸುರಕ್ಷಿತವಾಗಿ ಹಿಂದಕ್ಕೆ ಸರಿಸಲಾಗಿದೆ ಎಂದು ಇಸ್ರೊ ಭಾನುವಾರ ತಿಳಿಸಿದೆ.

ಕಾರ್ಯಾಚರಣೆಯ ದತ್ತಾಂಶಗಳನ್ನು ಮತ್ತಷ್ಟು ವಿಶ್ಲೇಷಿಸಿದ ನಂತರ ಡಾಕಿಂಗ್(ಜೋಡಣೆ) ಪ್ರಕ್ರಿಯೆಯನ್ನು ಮಾಡಲಾಗುತ್ತದೆ ಎಂದು ಬಾಹ್ಯಾಕಾಶ ಸಂಸ್ಥೆ ಹೇಳಿದೆ.

‘ಮೊದಲಿಗೆ 15 ಮೀಟರ್ಗಳವರೆಗೆ. ಬಳಿಕ, ಮೂರು ಮೀಟರ್ಗಳವರೆಗೆ ತಲುಪುವ ಪ್ರಾಯೋಗಿಕ ಪ್ರಯತ್ನವನ್ನು ಮಾಡಲಾಗಿದೆ. ಬಳಿಕ, ಬಾಹ್ಯಾಕಾಶ ನೌಕೆಗಳನ್ನು ಸುರಕ್ಷಿತ ದೂರದಲ್ಲಿ ಹಿಂದಕ್ಕೆ ಸರಿಸಲಾಗಿದೆ. ಕಾರ್ಯಾಚರಣೆಯ ದತ್ತಾಂಶವನ್ನು ಮತ್ತಷ್ಟು ವಿಶ್ಲೇಷಿಸಿದ ನಂತರ ಡಾಕಿಂಗ್ ಪ್ರಕ್ರಿಯೆಯನ್ನು ಮಾಡಲಾಗುತ್ತದೆ’ಎಂದು ಇಸ್ರೊ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ.

ಸ್ಪೇಸ್ ಡಾಕಿಂಗ್ ಪ್ರಯೋಗಕ್ಕೆ (ಸ್ಪೇಡೆಕ್ಸ್) ಎರಡು ಘೋಷಿತ ವೇಳಾಪಟ್ಟಿ( ಜನವರಿ 7 ಮತ್ತು ಜನವರಿ 9) ಮೀರಿ ಈಗ ಜೋಡಣೆ ಪ್ರಕ್ರಿಯೆ ನಡೆಸಲಾಗುತ್ತಿದೆ.

ಡಿಸೆಂಬರ್ 30ರಂದು ಆರಂಭವಾದ ಈ ಮಿಷನ್ ಅಡಿ ಎರಡು ಸಣ್ಣ ಬಾಹ್ಯಾಕಾಶ ನೌಕೆಗಳನ್ನು ಬಳಸಿಕೊಂಡು ಬಾಹ್ಯಾಕಾಶದಲ್ಲಿ ಡಾಕಿಂಗ್(ಜೋಡಣೆ) ಗುರಿಯನ್ನು ಹೊಂದಲಾಗಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 220 ಕೆ.ಜಿ ತೂಕದ ಎರಡು ಉಪಗ್ರಹಗಳನ್ನು ಹೊತ್ತೊಯ್ದಿದ್ದ ಪಿಎಸ್ಎಲ್ವಿ ಸಿ 60 ರಾಕೆಟ್, 475 ಕಿ. ಮೀ ವೃತ್ತಾಕಾರದ ಕಕ್ಷೆಗೆ ಸೇರಿಸಿದೆ.

ಸಣ್ಣ ಬಾಹ್ಯಾಕಾಶ ನೌಕೆಗಳನ್ನು ಬಳಸಿಕೊಂಡು ಬಾಹ್ಯಾಕಾಶದಲ್ಲಿ ಜೋಡಣೆ ಮಾಡುವ ಪ್ರಯೋಗವು, ಕಡಿಮೆ ವೆಚ್ಚದಲ್ಲಿ ಉನ್ನತ ತಂತ್ರಜ್ಞಾನ ಅಭಿವೃದ್ಧಿಪಡಿಸುವ ಮಿಷನ್ ಆಗಿದೆ ಎಂದು ಇಸ್ರೊ ಹೇಳಿದೆ.

‘ಸ್ಪೇಡೆಕ್ಸ್’ ಯೋಜನೆಯ ಯಶಸ್ಸು ಭಾರತೀಯ ಅಂತರಿಕ್ಷ ನಿಲ್ದಾಣ ಮತ್ತು ಚಂದ್ರನ ಮೇಲೆ ಗಗನಯಾತ್ರಿಯನ್ನು ಇಳಿಸುವುದು ಮುಂತಾದ ಭವಿಷ್ಯದ ಕಾರ್ಯಾಚರಣೆಗಳಿಗೆ ನಿರ್ಣಾಯಕ ಸಂಕೀರ್ಣ ತಂತ್ರಜ್ಞಾನಗಳಿಗೆ ದೇಶಕ್ಕೆ ನೆರವಾಗಲಿದೆ. ಜೊತೆಗೆ ಈ ಸಾಧನೆ ಮಾಡಿದ 4ನೇ ದೇಶವಾಗಲಿದೆ.

ಸಾಮಾನ್ಯ ಮಿಷನ್ ಉದ್ದೇಶಗಳನ್ನು ಸಾಧಿಸಲು ಬಹು ರಾಕೆಟ್ ಉಡಾವಣೆಗಳ ಅಗತ್ಯವಿರುವಾಗ ಬಾಹ್ಯಾಕಾಶದಲ್ಲಿ ಡಾಕಿಂಗ್ ತಂತ್ರಜ್ಞಾನವು ಅತ್ಯಗತ್ಯವಾಗಿರುತ್ತದೆ ಎಂದು ಅದು ಹೇಳಿದೆ.
.15 ಮೀಟರ್ ಅಂತರದಲ್ಲಿ ಸ್ಪೇಸ್ ಡಾಕಿಂಗ್ ಉಪಗ್ರಹಗಳು: ಇಸ್ರೊ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.