ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿಯವರ 100 ನೇ ‘ಮನ್ ಕಿ ಬಾತ್ ’ ಸಂಚಿಕೆಯನ್ನು ರೇಡಿಯೋದಲ್ಲಿ ಹೆಚ್ಚಿನ ಜನರು ಕೇಳಲು ವಿಶೇಷ ವ್ಯವಸ್ಥೆಗಳನ್ನು ಮಾಡುವಂತೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶನಿವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಮನ್ ಕಿ ಬಾತ್’ ನ 100 ನೇ ಸಂಚಿಕೆಯು ಭಾನುವಾರ ಪ್ರಸಾರವಾಗಲಿದೆ. ಈ ಸಂಚಿಕೆಯು ಅನೇಕ ಮಹತ್ವದ ಅಂಶಗಳನ್ನು ಒಳಗೊಂಡಿದೆ ಎಂದು ಧಾಮಿ ಹೇಳಿದರು.

ಶಾಲೆಗಳು, ಪದವಿ ಕಾಲೇಜುಗಳು, ಪಾಲಿಟೆಕ್ನಿಕ್‌ಗಳು, ಕೈಗಾರಿಕಾ ತರಬೇತಿ ಸಂಸ್ಥೆಗಳು ಮತ್ತು ಗ್ರಾಮಸಭೆಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ‘ಮನ್ ಕಿ ಬಾತ್’ನ 100 ನೇ ಸಂಚಿಕೆಯನ್ನು ಕೇಳಲು, ಮುಖ್ಯಮಂತ್ರಿಗಳ ನಿರ್ದೇಶನದಂತೆ ಎಲ್ಲಾ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಿಗ್ಗೆ 11 ಗಂಟೆಗೆ ಪ್ರಸಾರವಾಗಲಿರುವ ಈ ಸಂಚಿಕೆಯು ರಾಷ್ಟ್ರ ಮತ್ತು ಸಮಾಜವನ್ನು ನಿರ್ಮಿಸುವಲ್ಲಿ ಪ್ರಮುಖ ಪಾತ್ರವಹಿರುವ ಜನರ ಬಗ್ಗೆ ಪ್ರಧಾನಿ ಮಾತನಾಡಲಿದ್ದಾರೆ ಎಂದು ಧಾಮಿ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಗುರ್ಮಿತ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಹಿಂದಿನ ಆವೃತ್ತಿಗಳಲ್ಲಿ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ವ್ಯಕ್ತಿಗಳನ್ನು ವಿಶೇಷ ಪ್ರಸಾರಕ್ಕೆ ಆಹ್ವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತಿ ತಿಂಗಳ ಕೊನೆಯ ಭಾನುವಾರದಂದು ಪ್ರಸಾರವಾಗುವ ಮಾಸಿಕ ರೇಡಿಯೋ ಕಾರ್ಯಕ್ರಮದಲ್ಲಿ ಮೋದಿ ವಿವಿಧ ವಿಷಯಗಳ ಕುರಿತು ಮಾತನಾಡುತ್ತಾರೆ.

2014ರಲ್ಲಿ ಕೇಂದ್ರದಲ್ಲಿ ಬಿಜೆಪಿಯ ಅಧಿಕಾರಕ್ಕೆ ಬಂದ ಮೇಲೆ ಈ ಕಾರ್ಯಕ್ರಮ ಆರಂಭಗೊಂಡಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.