ಮುಂಬೈ: ಕಾಂಡ್ಲಾ ವಿಮಾನ ನಿಲ್ದಾಣದಿಂದ ಟೇಕ್ ಆದ ನಂತರ ವಿಮಾನದ ಚಕ್ರ ಕಳಚಿ ಬಿದ್ದ ಕಾರಣ ಸ್ಪೈಸ್ ಜೆಟ್ ವಿಮಾನ, ಮುಂಬೈಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ವರದಿಯಾಗಿದೆ.

ಇಂದು (ಸೆ.12) ಕಾಂಡ್ಲಾದಿಂದ ಮುಂಬೈಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ಕ್ಯೂ400 ವಿಮಾನದಲ್ಲಿ ಈ ಘಟನೆ ನಡೆದಿದೆ.

ಇದಾದ ಬಳಿಕವೂ ಮುಂಬೈಯತ್ತ ಪಯಣ ಬೆಳೆಸಿದ ವಿಮಾನ ಸುರಕ್ಷಿತವಾಗಿ ಇಳಿಯಿತು ಎಂದು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯು ತಿಳಿಸಿದೆ.

ವಿಮಾನದಿಂದ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿ ಇಳಿದಿದ್ದಾರೆ ಎಂದು ತಿಳಿಸಿದೆ.

ಘಟನೆ ಸಂಬಂಧ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
.ಏರ್ ಇಂಡಿಯಾ ವಿಮಾನದ ಎಂಜಿನ್ನಲ್ಲಿ ಬೆಂಕಿ: ತುರ್ತು ಭೂಸ್ಪರ್ಶ.ಮೇಡೇ..ಮೇಡೇ: ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೊ ವಿಮಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.