ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿನೇಶಾ ಫೋಗಟ್ ಅನರ್ಹ: ಲೋಕಸಭೆಯಲ್ಲಿ ಹೇಳಿಕೆ ನೀಡಲಿರುವ ಕ್ರೀಡಾ ಸಚಿವ

Published : 7 ಆಗಸ್ಟ್ 2024, 7:50 IST
Last Updated : 7 ಆಗಸ್ಟ್ 2024, 7:50 IST
ಫಾಲೋ ಮಾಡಿ
Comments

ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೈನಲ್ ಪಂದ್ಯದಿಂದ ಭಾರತದ ಕುಸ್ತಿಪಟು ವಿನೇಶಾ ಫೋಗಟ್‌ ಅವರು ಅನರ್ಹಗೊಂಡಿರುವುದರ ಬಗ್ಗೆ, ಕ್ರೀಡಾ ಸಚಿವ ಮನಸುಖ್ ಮಾಂಡವೀಯ ಅವರು ಬುಧವಾರ (ಇಂದು) ಲೋಕಸಭೆಯಲ್ಲಿ ಹೇಳಿಕೆ ನೀಡಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಅವರು ಮಾತನಾಡಲಿದ್ದಾರೆ ಎಂದು ಸಂಸದೀಯ ಸಚಿವಾಲಯದ ರಾಜ್ಯ ಸಚಿವ ಸಂಸತ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಮಹಿಳೆಯರ 50 ಕೆ.ಜಿ ಕುಸ್ತಿ ವಿಭಾಗದಲ್ಲಿ ಸ್ಪರ್ಧಿಸಿದ್ದ ವಿನೇಶಾ ಅವರನ್ನು 100 ಗ್ರಾಂ ಹೆಚ್ಚು ತೂಕ ಹೊಂದಿದ್ದಕ್ಕೆ ಒಲಿಂಪಿಕ್ಸ್ ಸಂಸ್ಥೆ ಅನರ್ಹಗೊಳಿಸಿದೆ.

ಮಂಗಳವಾರ ನಡೆದ 50 ಕೆ.ಜಿ ವಿಭಾಗದ ಮಹಿಳೆಯರ ಕುಸ್ತಿಯ ಸೆಮಿಫೈನಲ್‌ನಲ್ಲಿ ವಿನೇಶಾ 5–0 ಯಿಂದ ಕ್ಯೂಬಾದ ಯುಸೇನೆಯಲಿಸ್ ಗುಜ್ಮನ್ ಲೊಪೇಜ್ ವಿರುದ್ಧ ಗೆದ್ದಿದ್ದರು. ಇಂದು ರಾತ್ರಿ ನಡೆಯುವ ಫೈನಲ್‌ ಪಂದ್ಯದಲ್ಲಿ ಅಮೆರಿಕದ ಸೆರಾ ಹಿಲ್ದಿಬ್ರೇಟ್‌ ಅವರನ್ನು ವಿನೇಶಾ ಎದುರಿಸಬೇಕಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT