ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗಾದಲ್ಲಿನ ವೆಂಕಟೇಶ್ವರ ದೇವಸ್ಥಾನದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದ ದೃಶ್ಯ ಪಿಟಿಐ ಚಿತ್ರ
ಕಾಲ್ತುಳಿತದಲ್ಲಿ ಭಕ್ತರ ಸಾವಿನಿಂದ ಆಘಾತಗೊಂಡಿರುವೆ. ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸ್ಥಳೀಯ ಅಧಿಕಾರಿಗಳಿಗೆ ಚುನಾಯಿತ ಪ್ರತಿನಿಧಿಗಳಿಗೆ ಸೂಚಿಸಿರುವೆ.
-ಎನ್.ಚಂದ್ರಬಾಬು ನಾಯ್ಡು, ಮುಖ್ಯಮಂತ್ರಿ
ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ರಾಜ್ಯದಲ್ಲಿನ ದೇವಸ್ಥಾನಗಳಲ್ಲಿ ಜನರ ದಟ್ಟಣೆ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು.
-ಪವನ್ ಕಲ್ಯಾಣ್ ಉಪಮುಖ್ಯಮಂತ್ರಿ
ಜನಸಂದಣಿ ನಿರ್ವಹಣೆಗೆ ಅಗತ್ಯವಿರುವ ಕ್ರಮಗಳನ್ನು ದೇವಸ್ಥಾನ ಆಡಳಿತ ಮಂಡಳಿ ಕೈಗೊಂಡಿಲ್ಲ. ಅಲ್ಲದೇ ಭಾರಿ ಸಂಖ್ಯೆಯಲ್ಲಿ ಭಕ್ತರು ಸೇರುವ ಕುರಿತು ಅಧಿಕಾರಿಗಳಿಗೆ ತಿಳಿಸುವಲ್ಲಿ ಮಂಡಳಿ ವಿಫಲವಾಗಿದೆ.
- ಕೆ.ಅಚ್ಚನ್ನಾಯುಡು, ಸಚಿವ
ಇಂತಹ ಹಲವು ದುರ್ಘಟನೆಗಳು ಸಂಭವಿಸಿದ್ದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಡಳಿತ ಅಸಮರ್ಥ ಎಂಬುದನ್ನು ಇದು ತೋರಿಸುತ್ತದೆ
-ವೈ.ಎಸ್.ಜಗನ್‌ಮೋಹನ್ ರೆಡ್ಡಿ ವೈಎಸ್‌ಆರ್ ಕಾಂಗ್ರೆಸ್ ಮುಖ್ಯಸ್ಥ