ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸ ಪ್ರಸಾದ್‌ ಸಾಮಾಜಿಕ ನ್ಯಾಯದ ಚಾಂಪಿಯನ್: ಪ್ರಧಾನಿ ಮೋದಿ ಸಂತಾಪ

Published 29 ಏಪ್ರಿಲ್ 2024, 4:45 IST
Last Updated 29 ಏಪ್ರಿಲ್ 2024, 4:45 IST
ಅಕ್ಷರ ಗಾತ್ರ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

‘ಅವರ ಅಗಲುವಿಕೆಯಿಂದ ತೀವ್ರ ನೋವುಂಟಾಗಿದೆ. ಸಾಮಾಜಿಕ ನ್ಯಾಯದ ಚಾಂಪಿಯನ್‌ ಆಗಿದ್ದ ಅವರು, ತನ್ನ ಜೀವನವನ್ನು ಬಡವರ, ಕೆಳವರ್ಗದ ಹಾಗೂ ದಮನಿತರ ಕಲ್ಯಾಣಕ್ಕೆ ಮೀಸಲಿಟ್ಟವರು. ಸಮುದಾಯದ ಸೇವೆಗೆ ಅವರು ಹೆಸರುವಾಸಿಯಾಗಿದ್ದರು. ಅವರ ಕುಟುಂಬಸ್ಥರಿಗೆ ಹಾಗೂ ಬೆಂಬಲಿಗರಿಗೆ ಸಂತಾಪಗಳು’ ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಜೆಡಿಎಸ್‌ ವರಿಷ್ಠ ದೇವೇಗೌಡ ಅವರು ಕೂಡ ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ದುಃಖಿಸಿದ್ದಾರೆ. ಮಾಜಿ ಕೇಂದ್ರ ಸಚಿವರು ಹಾಗೂ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ವಾರ್ತೆ ಕೇಳಿ ಬಹಳ ದುಃಖವಾಗಿದೆ. ಅವರ ಅಗಲಿಕೆ ರಾಜಕೀಯಕ್ಕೆ‌ ತುಂಬಲಾರದ ನಷ್ಟ. ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬವರಿಗೆ ಮತ್ತು ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಶ್ರೀನಿವಾಸ ಪ್ರಸಾದ್ ಜನ ನಾಯಕ: ಮೋದಿ

ಬಾಗಲಕೋಟೆ: ‘ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಸಿಪಾಯಿ ಶ್ರೀನಿವಾಸ ಪ್ರಸಾದ್ ಜನ ನಾಯಕರಾಗಿದ್ದರು’ ಎಂದು ಪ್ರಧಾನಿ ನರೇಂದ್ರ ಮೋದಿ ಇಲ್ಲಿ ಸ್ಮರಿಸಿದರು.

‘ಅವರು ಹಲವು ದಶಕಗಳ ಸಾಮಾಜಿಕ ಜೀವನದ ಪ್ರತಿ ಕ್ಷಣವನ್ನು ಬಡವರು, ಶೋಷಿತರ, ವಂಚಿತರಿಗಾಗಿ ಮೀಸಲಿಟ್ಟರು. ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಉತ್ತಮ ಕೆಲಸ ಮಾಡಿದರು. ದಲಿತ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡಿಸಲು ಸದಾ ಯತ್ನಿಸಿದರು’ ಎಂದು  ವಿಜಯ ಸಂಕಲ್ಪ ಸಮಾವೇಶದಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT