ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರ್ಯಯಾನಕ್ಕೆ ಕ್ಷಣಗಣನೆ: ISRO ಮುಖ್ಯಸ್ಥ ಸೋಮನಾಥ್ ಅವರಿಂದ ಚೆಂಗಾಲಮ್ಮನಿಗೆ ಪೂಜೆ

ಇಸ್ರೊ ಮುಖ್ಯಸ್ಥ ಎಸ್‌. ಸೋಮನಾಥ್ ಅವರು ಶುಕ್ರವಾರ ತಿರುಪತಿ ಜಿಲ್ಲೆಯ ಪ್ರಸಿದ್ಧ ಸೂಳ್ಳೂರುಪೇಟ ಚೆಂಗಾಲಮ್ಮ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
Published 1 ಸೆಪ್ಟೆಂಬರ್ 2023, 10:44 IST
Last Updated 1 ಸೆಪ್ಟೆಂಬರ್ 2023, 10:44 IST
ಅಕ್ಷರ ಗಾತ್ರ

ತಿರುಪತಿ: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಕೈಗೊಳ್ಳುತ್ತಿರುವ ಮಹತ್ವಕಾಂಕ್ಷೆಯ ಸೂರ್ಯಯಾನ ಯೋಜನೆಗೆ ಕ್ಷಣಗಣನೆ ಆರಂಭವಾಗಿದೆ.

ಏತನ್ಮಧ್ಯೆ ಇಸ್ರೊ ಮುಖ್ಯಸ್ಥ ಎಸ್‌. ಸೋಮನಾಥ್ ಅವರು ತಿರುಪತಿ ಜಿಲ್ಲೆಯ ಪ್ರಸಿದ್ಧ ಸೂಳ್ಳೂರುಪೇಟ ಚೆಂಗಾಲಮ್ಮ ದೇವಾಲಯಕ್ಕೆ ತೆರಳಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದರು.

ಬೆಳಿಗ್ಗೆ 7.30 ಕ್ಕೆ ಪೂಜೆ ಸಲ್ಲಿಸಿದ ಅವರು, ಇಸ್ರೊ ಯೋಜನೆ ಯಶಸ್ವಿಯಾಗಲೆಂದು ಬೇಡಿಕೊಂಡಿರುವುದಾಗಿ ಅರ್ಚಕರು ತಿಳಿಸಿದರೆಂದು ಪಿಟಿಐ ವರದಿ ತಿಳಿಸಿದೆ.

ಸೆ.2 ಶನಿವಾರ ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಆದಿತ್ಯ ಎಲ್‌–1 ಉಪಗ್ರಹ ಹೊತ್ತ ಪಿಎಸ್‌ಎಲ್‌ವಿ–ಸಿ 57 ರಾಕೆಟ್ ನಭಕ್ಕೆ ಚಿಮ್ಮಲಿದೆ ಎಂದು ಸೋಮನಾಥ್ ಮಾಧ್ಯಮಗಳಿಗೆ ತಿಳಿಸಿದರು.

ಆದಿತ್ಯ ಎಲ್‌–1 ಉಪಗ್ರಹ ಸೂರ್ಯನ ಪ್ರಭಾವಲಯವನ್ನು (ರೇಡಿಯಸ್ ವ್ಯಾಪ್ತಿ) ಸೇರಲು 125 ದಿನ ಬೇಕಾಗುತ್ತದೆ ಎಂದು ತಿಳಿಸಿದರು. ಚಂದ್ರಯಾನ–3ರ ವಿಕ್ರಮ್ ಲ್ಯಾಂಡರ್ ಹಾಗೂ ಪ್ರಜ್ಞಾನ್ ರೋವರ್ ಉತ್ತಮವಾಗಿ ಕೆಲಸ ಮಾಡುತ್ತಿವೆ ಎಂದು ತಿಳಿಸಿದರು.

ಚಂದ್ರಯಾನ–3ಕ್ಕೂ ಮುನ್ನ ಎಸ್ ಸೋಮನಾಥ್ ಅವರು ಇದೇ ಚಂಗಾಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT