ರಾಯ್ಪುರ: ಛತ್ತೀಸಗಢದ ಬುಡಕಟ್ಟು ಸಮುದಾಯದ 10 ಜನರು ಸಿಬ್ಬಂದಿ ನೇಮಕಾತಿ ಆಯೋಗದ (ಎಸ್ಎಸ್ಸಿ) ರಾಜ್ಯ ಪೊಲೀಸ್ ಕಾನ್ಸ್ಟೆಬಲ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಯುವಕರು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿರುವ ಇಂಡೊ–ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಬೆಟಾಲಿಯನ್ ಪಡೆಗಳಿಂದ ಎರಡು ವರ್ಷ ತರಬೇತಿ ಪಡೆದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ನಕ್ಸಲ್ ಪೀಡಿತ ಮೋಹ್ಲ– ಮಾನ್ಪುರ- ಅಂಬಾಗಢ ಚೌಕಿ ಜಿಲ್ಲೆಯ ಅಭ್ಯರ್ಥಿಗಳು ಈ ಸಾಧನೆ ಮಾಡಿದ್ದಾರೆ. 23–25 ವರ್ಷದೊಳಗಿನ ವಿದ್ಯಾರ್ಥಿಗಳು ಇತ್ತೀಚೆಗೆ ರಾಜ್ಯ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿಗಾಗಿ ಎಸ್ಎಸ್ಸಿ ನಡೆಸಿದ ದೈಹಿಕ ಮತ್ತು ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅಂತಿಮ ಅರ್ಹತಾ ಪಟ್ಟಿಗಾಗಿ ಕಾಯುತ್ತಿದ್ದೇವೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.