ಚೆನ್ನೈ: ಎಲ್ಪಿಜಿ ಅಭಾವದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕಿಡಿಕಾರಿದ್ದಾರೆ.

‘ನಿಮ್ಮ ಲೋಪಗಳನ್ನು ಜನರ ಮೇಲೆ ಹೇರಲಾಗದು’ ಎಂದು ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ ಬಿಕ್ಕಟ್ಟು ಎದುರಿಸಿದ ಮಾದರಿಯಲ್ಲೇ ಪಶ್ಚಿಮ ಏಷ್ಯಾದಲ್ಲಿನ ಯುದ್ಧ ಬಿಕ್ಕಟ್ಟಿನಿಂದಾಗುವ ಪರಿಣಾಮಗಳನ್ನು ಎದುರಿಸಲು ಸಿದ್ಧರಾಗಬೇಕು ಎಂದು ಮೋದಿ ಕರೆ ನೀಡಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸ್ಟಾಲಿನ್, ‘ಜನರು ಯಾವುದಕ್ಕೆ ಸಿದ್ಧರಾಗಬೇಕು? ನಾಯಕತ್ವಕ್ಕೋ ಅಥವಾ ನಾಯಕತ್ವದ ಅನುಪಸ್ಥಿತಿಗೋ’ ಎಂದು ಲೇವಡಿ ಮಾಡಿದ್ದಾರೆ.

ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕಿದ್ದದ್ದು ಯಾರು ? ಕೇಂದ್ರ ಸರ್ಕಾರವೋ ಅಥವಾ ಜನರೋ? ನಮ್ಮನ್ನು ರಕ್ಷಿಸಲು ನೀವೇಕೆ ಸಿದ್ಧತೆ ಮಾಡಿಕೊಂಡಿಲ್ಲ‘ ಎಂದೂ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.