ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿಯೇತರರಿಗೆ ಮಾತೃಭಾಷೆಯಲ್ಲಿ CRPF ಪರೀಕ್ಷೆ ಬರೆಯಲು ಅವಕಾಶ ನೀಡಿ: ಸ್ಟಾಲಿನ್‌

Last Updated 9 ಏಪ್ರಿಲ್ 2023, 11:22 IST
ಅಕ್ಷರ ಗಾತ್ರ

ಚೆನ್ನೈ: ಕೇಂದ್ರ ಮೀಸಲು ಪೊಲೀಸ್ ಪಡೆಗೆ(ಸಿಆರ್‌ಪಿಎಫ್) ನಡೆಸುವ ನೇಮಕಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳ ಅಭ್ಯರ್ಥಿಗಳಿಗೆ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಆಗ್ರಹಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತಾಗಿ ಭಾನುವಾರ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ ಎಂದು ತಮಿಳುನಾಡು ಸರ್ಕಾರ ಪ್ರಕಟಿಸಿದೆ.

ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ನಡೆಯುತ್ತಿದ್ದು, ಇದರಿಂದ ತಮಿಳು ನಾಡಿನಂಥ ರಾಜ್ಯಗಳಿಂದ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಹಿನ್ನೆಡೆಯಾಗುತ್ತಿದೆ. ಆಯಾಯ ಅಭ್ಯರ್ಥಿಗಳ ರಾಜ್ಯದ ಪ್ರಧಾನ ಭಾಷೆಯ ಮೂಲಕವೇ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕೆಂದು ಸ್ಟಾಲಿನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಆರ್‌ಪಿಎಫ್‌ ಪ್ರಶ್ನೆ ಪತ್ರಿಕೆಯಲ್ಲಿ 100 ಅಂಕಗಳಲ್ಲಿ 25 ಅಂಕ ಹಿಂದಿ ಗ್ರಹಿಕೆಗೆ ಮೀಸಲಾಗಿದೆ. ಆದರೆ ಇದರಿಂದ ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರಯೋಜನವಾಗುತ್ತಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT