ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆಯೊಡತಿಗೆ ಮಾಸಿಕ ₹1,000: ಯೋಜನೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಚಾಲನೆ

Published 15 ಸೆಪ್ಟೆಂಬರ್ 2023, 7:09 IST
Last Updated 15 ಸೆಪ್ಟೆಂಬರ್ 2023, 7:09 IST
ಅಕ್ಷರ ಗಾತ್ರ

ಕಾಂಚೀಪುರಂ: ಮನೆಯೊಡತಿಗೆ ಮಾಸಿಕ ₹1,000 ಆರ್ಥಿಕ ನೆರವು ನೀಡುವ ತಮಿಳುನಾಡಿನ ಡಿಎಂಕೆ ಸರ್ಕಾರದ ಪ್ರಮುಖ ಸಮಾಜ ಕಲ್ಯಾಣ ಯೋಜನೆಗೆ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಮಾಜಿ ಮುಖ್ಯಮಂತ್ರಿ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಚಾಲನೆ ನೀಡಿದರು.

ಹಲವು ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್‌ಗಳನ್ನು ವಿತರಿಸುವ ಮೂಲಕ ಯೋಜನೆ ಆರಂಭಿಸಿದರು. ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಯೋಜನೆಗೆ ಚಾಲನೆ ನೀಡಿದರು.

ಮಹಿಳೆಯರ ಜೀವನದ ಗುಣಮಟ್ಟ ಹೆಚ್ಚಿಸಲು ಆರಂಭಿಸಿರುವ ಈ ಯೋಜನೆಯ ಉಪಕ್ರಮ ‘ಮಗಲಿರ್ ಉರಿಮೈ ತೊಗೈ’ನಡಿ ಹಣವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. ಇದನ್ನು ನಗದೀಕರಿಸಿಕೊಳ್ಳಲು ಅವರೆಲ್ಲರಿಗೂ ಎಟಿಎಂ ಕಾರ್ಡ್‌ಗಳನ್ನು ವಿತರಿಸಲಾಗುತ್ತಿದೆ, ಯೋಜನೆಯನ್ನು ಮಹಿಳೆಯರ ಹಕ್ಕು ಎಂದು ಸರ್ಕಾರ ಕರೆದಿದೆ.

ಯೋಜನೆ ಅಡಿಯಲ್ಲಿ 1.06 ಕೋಟಿ ಮಹಿಳೆಯರನ್ನು (1,06,50,000) ಫಲಾನುಭವಿಗಳೆಂದು ಸರ್ಕಾರ ಗುರುತಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT