ನವದೆಹಲಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ.

ಮೃತರಲ್ಲಿ ಮೂವರು ಮಕ್ಕಳು ಸೇರಿದಂತೆ ಮಹಿಳೆಯರು ಇದ್ದಾರೆ. ಇವರ ಮೃತದೇಹಗಳನ್ನು ಜಯಪ್ರಕಾಶ್ ನಾರಾಯಣ ಆಸ್ಪತ್ರೆಯಲ್ಲಿ ಇಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪೈಕಿ ಮೂವರ ಮೃತದೇಹಗಳ ಗುರುತು ಪತ್ತೆಯಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ಲಾಟ್ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.

ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
.ಮಹಾ ಕುಂಭಮೇಳ ಕಾಲ್ತುಳಿತ: ಬೆಳಗಾವಿಯಲ್ಲೇ ನಾಲ್ಕು ಮೃತದೇಹಗಳ ಮರಣೋತ್ತರ ಪರೀಕ್ಷೆ.ಮಹಾ ಕುಂಭಮೇಳ ಕಾಲ್ತುಳಿತ: 3 ಕಿ.ಮೀ ದೂರದಲ್ಲಿ ಮತ್ತೊಂದು ಕಾಲ್ತುಳಿತ; 7 ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.