ನವದೆಹಲಿ: ಕನಿಷ್ಠ 18 ಜನರ ಸಾವಿಗೆ ಕಾರಣವಾದ ನವದೆಹಲಿ ರೈಲು ನಿಲ್ದಾಣ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಆರಂಭಿಸಿರುವ ದೆಹಲಿ ಪೊಲೀಸರು, ಘಟನೆ ಸ್ಫೋಟಗೊಳ್ಳುವ ಮುನ್ನ ಏನಾಯಿತು ಎಂಬುವುದರ ಬಗ್ಗೆ ನಿರ್ಧರಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ಕಾಲ್ತುಳಿತ ಸಂಭವಿಸಲು ಕಾರಣವಾದ ಘಟನೆ ಏನೆಂಬುವುದನ್ನು ತಿಳಿದುಕೊಳ್ಳುವುದು ನಮ್ಮ ಮೊದಲ ಗುರಿಯಾಗಿದೆ. ಆ ಸಮಯದ ಸಿಸಿಟಿವಿ ದೃಶ್ಯಾವಳಿಗಳನ್ನು ಮತ್ತು ಧ್ವನಿ ಪ್ರಕಟಣೆಗಳನ್ನು ಸಂಗ್ರಹಿಸುತ್ತಿದ್ದೇವೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ಲಾರ್ಟ್ಫಾರ್ಮ್ ಬದಲಾವಣೆ ಬಗ್ಗೆ ತಪ್ಪಾಗಿ ಪ್ರಕಟಣೆ ಹೊರಡಿಸಿದ್ದರಿಂದ ಗೊಂದಲ ಉಂಟಾಗಿ ಕಾಲ್ತುಳಿತ ಸಂಭವಿಸಿರುವ ಸಾಧ್ಯತೆಯಿದೆ ಎಂದೂ ಮೂಲಗಳು ತಿಳಿಸಿವೆ.

ಪ್ಲಾಟ್ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾದದ್ದು ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.