ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಹಾಗೂ ನಟ ರಾಮ್ ಚರಣ್ ಅವರ ವೈಯಕ್ತಿಕ ಜೀವನದ ಬಗ್ಗೆ ಹಾಸ್ಯ ಮಾಡಿದ ಆರೋಪದ ಮೇಲೆ ಸ್ಟ್ಯಾಂಡಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲರನ್ನು ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್ ಮೂಲದ ಸ್ಟ್ಯಾಂಡಪ್ ಕಾಮಿಡಿಯನ್ ಅನುದೀಪ್ ಕಾಟಿಕಾಲ ಇತ್ತೀಚೆಗೆ ಯೂಟ್ಯೂಬ್ನಲ್ಲಿ ಹಂಚಿಕೊಂಡಿದ್ದ ವಿಡಿಯೊದಲ್ಲಿ ಪವನ್ ಕಲ್ಯಾಣ್ ಮತ್ತು ನಿಹಾರಿಕಾ ಕೊನಿಡೇಲಾ ಅವರ ವಿಚ್ಛೇದನದ ಬಗ್ಗೆ ಹಾಸ್ಯ ಮಾಡಿದ್ದರು. ‘ಹೆಂಡತಿಗೆ ಹೇಗೆ ವಿಚ್ಛೇದನ ನೀಡಬೇಕು ಎಂಬುದನ್ನು ಪವನ್ ಕಲ್ಯಾಣ್ ಅವರನ್ನು ನೋಡಿ ಕಲಿಯಬೇಕು’ ಎಂದು ವ್ಯಂಗ್ಯವಾಡಿದ್ದರು. ಹಾಗೇ ಇತ್ತೀಚೆಗೆ ವಿಚ್ಛೇದನ ಪಡೆದ ಸೋದರಸಂಬಂಧಿ ನಿಹಾರಿಕಾ ಕೊನಿಡೆಲ ಅವರು ಈ ವಿಷಯದಲ್ಲಿ ತಮ್ಮ ಚಿಕ್ಕಪ್ಪನಿಂದ ಸಲಹೆ ಪಡೆಯಬಹುದು ಎಂದಿದ್ದರು. ಇದಲ್ಲದೆ ರಾಮ್ ಚರಣ್ ಅವರನ್ನು ಕೆಟ್ಟ ಪದಗಳಿಂದ ನಿಂದಿಸಿದ್ದರು.

ಇದು ಪವನ್ ಕಲ್ಯಾಣ್ ಅವರ ಅಭಿಮಾನಿಗಳು ಮತ್ತು ಜನಸೇನಾ ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಪವನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ಸ್ಟಾಂಡಪ್ ಕಾಮಿಡಿ ನಡೆಯುತ್ತಿದ್ದ ಜಾಗಕ್ಕೆ ಹೋಗಿ ಗಲಾಟೆ ಸಹ ಮಾಡಿದ್ದರು.

ಜನಸೇನಾ ಪಕ್ಷದ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಆಂಧ್ರಪ್ರದೇಶದ ಕಾಕಿನಾಡ ಪೊಲೀಸರು ಅನುದೀಪ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು. ಏಪ್ರಿಲ್ 14ರಂದು ತಮ್ಮ ಕುಟುಂಬದವರನ್ನು ಭೇಟಿ ಮಾಡಲು ಹೋಗಿದ್ದ ಅನುದೀಪ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಅನುದೀಪ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಮಾನನಷ್ಟ ಮೊಕದ್ದಮೆ, ಸಾರ್ವಜನಿಕ ಶಾಂತಿ ಭಂಗ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಅನುದೀಪ್ ಅವರನ್ನು ರೈಲಿನ ಮೂಲಕ ಕಾಕಿನಾಡಕ್ಕೆ ಕರೆತರುತ್ತಿದ್ದಾರೆ. ಈ ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಯಾಗುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.