ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್: ಎರಡು ಬಸ್‌ಗಳ ನಡುವೆ ಡಿಕ್ಕಿ; ಮೂವರ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ

Published 1 ಜೂನ್ 2024, 11:33 IST
Last Updated 1 ಜೂನ್ 2024, 11:33 IST
ಅಕ್ಷರ ಗಾತ್ರ

ಮೊಡಸಾ (ಗುಜರಾತ್‌): ರಾಜ್ಯ ಸಾರಿಗೆ ಬಸ್‌ವೊಂದು ದ್ವಿಚಕ್ರ ವಾಹನ ಹಾಗೂ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು (ಶನಿವಾರ) ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಕರಿಯಾ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ಸಾರಿಗೆ ಬಸ್‌ ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡಿದಿದೆ. ಬಳಿಕ ರಸ್ತೆ ವಿಭಜಕವನ್ನು ದಾಟಿ ರಸ್ತೆಯಲ್ಲಿ ಸಾಗುತ್ತಿದ್ದ ಐಷಾರಾಮಿ ಖಾಸಗಿ ಬಸ್‌ಗೆ ಡಿಕ್ಕಿ ಹೊಡಿದಿದೆ ಎಂದು ಅವರು ಹೇಳಿದ್ದಾರೆ.

ಒಡಿಶಾದ ಪುರಿ ಜಗನ್ನಾಥ ದೇವಸ್ಥಾನದ ತೀರ್ಥಯಾತ್ರೆ ಮುಗಿಸಿ ವಡೋದರಾದ ಸಾವ್ಲಿಗೆ ಹಿಂದಿರುಗುತ್ತಿದ್ದ ಪ್ರಯಾಣಿಕರನ್ನು ಖಾಸಗಿ ಬಸ್ ಹೊತ್ತೊಯ್ಯುತ್ತಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಅವಘಡದಲ್ಲಿ ದ್ವಿಚಕ್ರ ವಾಹನ ಸವಾರ ಮತ್ತು ಖಾಸಗಿ ಬಸ್‌ನ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಎರಡೂ ಬಸ್‌ಗಳ ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಸುಮಾರು 15 ರಿಂದ 20 ಮಂದಿಯನ್ನು ಚಿಕಿತ್ಸೆಗಾಗಿ ನೆರೆಯ ಸಬರ್ಕಾಂತ ಜಿಲ್ಲೆಯ ಹಿಮತ್‌ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಮೊಡಸಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಬ್‌ ಇನ್‌ಸ್ಪೆಕ್ಟರ್‌ ಅಜಯ್‌ಸಿಂಹ ರಾಥೋಡ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT