ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಂ– ಕಿಸಾನ್‌ ಯೋಜನೆ: ರೈತರನ್ನು ಗುರುತಿಸಲು ನೀತಿ ಆಯೋಗ ಸೂಚನೆ

Last Updated 2 ಫೆಬ್ರುವರಿ 2019, 19:34 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರ ಶುಕ್ರವಾರ ಬಜೆಟ್‌ನಲ್ಲಿ ಘೋಷಿಸಿದ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ (ಪಿಎಂ–ಕಿಸಾನ್‌) ಯೋಜನೆಗೆ ಸಣ್ಣ ಮತ್ತು ಅತಿ ಸಣ್ಣ ರೈತ ಫಲಾನುಭವಿಗಳನ್ನು ಬೇಗನೇ ಗುರುತಿಸುವಂತೆ ನೀತಿ ಆಯೋಗವು ರಾಜ್ಯಗಳಿಗೆ ಸೂಚಿಸಿದೆ.

ಈ ಯೋಜನೆಯಡಿ ಎರಡು ಹೆಕ್ಟೇರ್‌ವರೆಗೆ ಕೃಷಿ ಜಮೀನು ಹೊಂದಿರುವ ರೈತರ ಬ್ಯಾಂಕ್‌ ಖಾತೆಗೆ ವಾರ್ಷಿಕ ₹ 6,000 ಮೊತ್ತವನ್ನು ನೇರವಾಗಿ ಜಮಾ ಮಾಡಲು ಉದ್ದೇಶಿಸಲಾಗಿದೆ..

ಫಲಾನುಭವಿಗಳನ್ನು ಗುರುತಿಸಲು ರಾಜ್ಯಗಳ ಮುಖ್ಯ ಕಾರ್ಯದರ್ಶಿ ಮತ್ತು ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್‌ ಕುಮಾರ್‌ ಶನಿವಾರ ತಿಳಿಸಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಈ ಯೋಜನೆಗೆ ಅಂದಾಜು 12 ಕೋಟಿ ರೈತರಿಗೆ ನೆರವು ಒದಗಿಸಲು ಸರ್ಕಾರ ₹20,000 ಕೋಟಿ ಮೀಸಲಿರಿಸಿದೆ.

ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಈ ಯೋಜನೆ ಅನುಷ್ಠಾನದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ. ಈಶಾನ್ಯ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರಲು ಕೆಲ ಸಮಯ ಬೇಕಾಗಬಹುದು ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT