ನವದೆಹಲಿ: ಶಾಲೆಗೆ ಹೋಗುವ ಹೆಣ್ಣುಮಕ್ಕಳ ‘ಮುಟ್ಟಿನ ಅವಧಿಯ ನೈರ್ಮಲ್ಯ ಕುರಿತ ರಾಷ್ಟ್ರೀಯ ನೀತಿ’ಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಕ್ರಿಯಾಯೋಜನೆ ಸಲ್ಲಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ವಿದ್ಯಾರ್ಥಿನಿಯರಿಗೆ ಕಡಿಮೆ ವೆಚ್ಚದ ಶುಚಿತ್ವದ ವಸ್ತುಗಳು ಲಭ್ಯವಾಗುವಂತೆ ಮಾಡುವುದನ್ನು ಹಾಗೂ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಗುಣಮಟ್ಟದ ನೈರ್ಮಲ್ಯ ವ್ಯವಸ್ಥೆ ಇದೆ ಎನ್ನುವುದನ್ನು ಖಾತರಿಪಡಿಸುವಂತೆ ತಿಳಿಸಿದೆ.

ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳು ಸಮಗ್ರ ಕ್ರಿಯಾಯೋಜನೆ ರೂಪಿಸುವ ಅಗತ್ಯವಿದೆ ಎಂದು ನ.12ರಂದು ಸುಪ್ರೀಂ ಕೋರ್ಟ್ ತಿಳಿಸಿತ್ತು. ಇದರ ಬೆನ್ನಲ್ಲೇ, ಕೇಂದ್ರ ಆರೋಗ್ಯ ಸಚಿವಾಲಯವು ಈ ಸಂಬಂಧ ಕ್ರಿಯಾಯೋಜನೆ ಸಲ್ಲಿಸುವಂತೆ ರಾಜ್ಯಗಳಿಗೆ ಪತ್ರ ಬರೆದಿದೆ.

‘ಶಾಲೆಗೆ ಹೋಗುವ ಹೆಣ್ಣುಮಕ್ಕಳ ಮುಟ್ಟಿನ ಅವಧಿಯ ನೈರ್ಮಲ್ಯ ಕುರಿತ ನೀತಿ’ಗೆ ಕೇಂದ್ರ ಆರೋಗ್ಯ ಸಚಿವಾಲಯವು ನ.2ರಂದು ಒಪ್ಪಿಗೆ ನೀಡಿರುವುದಾಗಿ ಕಳೆದ ತಿಂಗಳು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.