‘ಉತ್ತರ ಪ್ರದೇಶದ ಕೆಲವು ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳು ಮಕ್ಕಳು, ವೃದ್ಧರು ಹಾಗೂ ಯುವಕರ ಮೇಲೆ ದಾಳಿ ನಡೆಸುತ್ತಿವೆ. ಇದರಿಂದಾಗಿ ಬಡವರು, ಶ್ರಮಿಕರು ತಮ್ಮ ಪ್ರಾಣಿಗಳಿಗೆ ಬೇಕಾದ ಮೇವಿನ ವ್ಯವಸ್ಥೆ ಮಾಡಿಕೊಳ್ಳಲು ಆಗುತ್ತಿಲ್ಲ. ಸರ್ಕಾರ ಇದನ್ನು ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು. ವನ್ಯ ಪ್ರಾಣಿಗಳ ನಿಯಂತ್ರಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬುಲ್ಡೋಜರ್ ರಾಜಕೀಯ ಬಿಡಿ ಎಂದು ಅವರು ಸರ್ಕಾರ ಮತ್ತು ಸಮಾಜವಾದಿ ಪಕ್ಷಕ್ಕೆ ಮನವಿ ಮಾಡಿಕೊಂಡಿದ್ದಾರೆ. ಅದನ್ನು ಸುಪ್ರೀಂ ಕೋರ್ಟ್ ನೋಡಿಕೊಳ್ಳಲಿದ್ದು, ಅಲ್ಲಿ ಜನರಿಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.