ಸೋಮವಾರ, 11 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಮೈ ಲಾರ್ಡ್' ಸಂಬೋಧನೆ ನಿಲ್ಲಿಸಿದರೆ ನನ್ನ ಅರ್ಧ ಸಂಬಳ ನೀಡುವೆ: ನ್ಯಾ. ನರಸಿಂಹ

Published 3 ನವೆಂಬರ್ 2023, 5:15 IST
Last Updated 3 ನವೆಂಬರ್ 2023, 5:15 IST
ಅಕ್ಷರ ಗಾತ್ರ

ನವದೆಹಲಿ: ನ್ಯಾಯಾಂಗ ಪ್ರಕ್ರಿಯೆ ಸಂದರ್ಭದಲ್ಲಿ ವಕೀಲರು ಪ್ರಕರಣಗಳ ಕುರಿತು ವಾದ ಮಂಡಿಸುವಾಗ 'ಮೈ ಲಾರ್ಡ್' ಮತ್ತು 'ಯುವರ್ ಲಾರ್ಡ್‌ಶಿಪ್' ಎಂದು ಸಂಬೋಧಿಸುತ್ತಾರೆ. ಆದರೆ ಇದಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಅವರೊಂದಿಗಿನ ಪೀಠದಲ್ಲಿದ್ದ ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಅವರು ಹಿರಿಯ ವಕೀಲರೊಬ್ಬರಿಗೆ ‘ಮೈ ಲಾರ್ಡ್ಸ್ ಎಂದು ಎಷ್ಟು ಬಾರಿ ಹೇಳುತ್ತೀರಿ?. ಹೀಗೆ ಹೇಳುವುದನ್ನು ನಿಲ್ಲಿಸಿದರೆ ನನ್ನ ಸಂಬಳದಲ್ಲಿ ಅರ್ಧದಷ್ಟು ನಿಮಗೆ ಕೊಡುತ್ತೇನೆ' ಎಂದು ಹೇಳಿದ್ದರು.

ಸರ್ ಎಂದು ಏಕೆ ಬಳಸಬಾರದು?, ಇಲ್ಲದಿದ್ದರೆ ಹಿರಿಯ ವಕೀಲರು ಮೈ ಲಾರ್ಡ್ಸ್ ಎಂಬ ಪದವನ್ನು ಎಷ್ಟು ಬಾರಿ ಉಚ್ಚರಿಸಿದ್ದಾರೆ ಎಂದು ಲೆಕ್ಕ ಹಾಕಬೇಕಾಗುತ್ತದೆ ಎಂದು ನ್ಯಾ.ನರಸಿಂಹ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT