ಉಪ ಸ್ಪೀಕರ್ ಹುದ್ದೆಗೆ ಕೋರಿಕೆ
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರನ್ನು ಭಾನುವಾರ ಭೇಟಿ ಮಾಡಿದ ಮಹಾ ವಿಕಾಸ ಆಘಾಡಿ ಮೈತ್ರಿಕೂಟದ (ಎಂವಿಎ) ನಾಯಕರು ವಿಧಾನಸಭೆಯ ಉಪ ಸ್ಪೀಕರ್ ಹುದ್ದೆಯನ್ನು ಎಂವಿಎ ಪಕ್ಷಗಳಿಗೆ ಬಿಟ್ಟುಕೊಡಬೇಕು ಎಂದು ಮನವಿ ಮಾಡಿದರು. ಸಂಪ್ರದಾಯದಂತೆ ಉಪ ಸ್ಪೀಕರ್ ಹುದ್ದೆಯನ್ನು ವಿರೋಧ ಪಕ್ಷಗಳಿಗೆ ಬಿಟ್ಟುಕೊಟ್ಟರೆ ಸ್ಪೀಕರ್ ಆಯ್ಕೆಯನ್ನು ಅವಿರೋಧವಾಗಿ ನಡೆಸಲು ಅವಕಾಶ ಮಾಡಿಕೊಡಲಾಗುತ್ತದೆ ಎಂದು ಎಂವಿಎ ನಾಯಕರು ಫಡಣವೀಸ್ ಅವರಿಗೆ ತಿಳಿಸಿದರು.