ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಾಶಯಗಳಲ್ಲಿ ನೀರು ಸಂಗ್ರಹ ಕುಸಿತ: ಕೇಂದ್ರ ಜಲ ಆಯೋಗ

ಗರಿಷ್ಠ ಸಂಗ್ರಹ ಸಾಮರ್ಥ್ಯದ ಶೇ 36ರಷ್ಟು ನೀರು ಲಭ್ಯ
Published 29 ಮಾರ್ಚ್ 2024, 14:31 IST
Last Updated 29 ಮಾರ್ಚ್ 2024, 14:31 IST
ಅಕ್ಷರ ಗಾತ್ರ

ನವದೆಹಲಿ: ದೇಶದ 150 ಪ್ರಮುಖ ಜಲಾಶಯಗಳಲ್ಲಿ ಅವುಗಳ ಗರಿಷ್ಠ ಸಂಗ್ರಹ ಸಾಮರ್ಥ್ಯದ ಶೇ 36ರಷ್ಟು ಮಾತ್ರ ನೀರು ಲಭ್ಯ ಇದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳ ಜಲಾಶಯಗಳಲ್ಲಿ ನೀರಿನ ಸಂಗ್ರಹ ಸಾಮರ್ಥ್ಯ ಗಣನೀಯ ಪ್ರಮಾಣದಲ್ಲಿ ಕುಸಿದಿದೆ ಎಂದು ಕೇಂದ್ರ ಜಲ ಆಯೋಗ ಬಿಡುಗಡೆ ಮಾಡಿರುವ ಅಂಕಿಅಂಶ ಹೇಳುತ್ತದೆ.

ಕಳೆದ ಹತ್ತು ವರ್ಷಗಳ ಸರಾಸರಿ ಪ್ರಮಾಣಕ್ಕೆ ಹೋಲಿಸಿದರೂ, ನೀರು ಸಂಗ್ರಹ ಸಾಮರ್ಥ್ಯದಲ್ಲಿ ಇಳಿಕೆ ಕಂಡುಬಂದಿದೆ ಎಂದು ಆಯೋಗ ತಿಳಿಸಿದೆ.

ಬೆಂಗಳೂರು ನೀರಿನ ಕೊರತೆಯಿಂದ ಸಂಕಷ್ಟ ಎದುರಿಸುತ್ತಿವೆ. ಕರ್ನಾಟಕದಲ್ಲಿ ಕಳೆದ ಮುಂಗಾರಿನಲ್ಲಿ ಮಳೆ ಕಡಿಮೆ ಬಿದ್ದ ಕಾರಣ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ವೇಗದ ನಗರೀಕರಣದ ಪರಿಣಾಮ ಕೆರೆಗಳು ಸಹ ಬತ್ತಿಹೋಗಿವೆ ಸಮಸ್ಯೆ ಮತ್ತಷ್ಟು ಉಲ್ಬಣಿಸಿದೆ ಎಂದು ಆಯೋಗ ಗುರುವಾರ ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಪ್ರಸಕ್ತ ಬೇಸಿಗೆಯಲ್ಲಿ ದಿನಗಳು ಕಳೆದಂತೆ, ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದೆ ಎಂದು ತಿಳಿಸಿದೆ.

150 ಜಲಾಶಯಗಳ ಗರಿಷ್ಠ ಸಂಗ್ರಹ ಸಾಮರ್ಥ್ಯ 178.784 ಬಿಸಿಎಂ (ಶತಕೋಟಿ ಘನ ಮೀಟರ್‌ಗಳು) ಇದೆ. ಸದ್ಯ, ಒಟ್ಟು ಸಾಮರ್ಥ್ಯದ ಶೇ 36ರಷ್ಟು ಅಂದರೆ, 64.606 ಬಿಸಿಎಂನಷ್ಟು ನೀರು ಸಂಗ್ರಹ ಇದೆ ಎಂದು ಆಯೋಗ ತಿಳಿಸಿದೆ.

ಕಳೆದ ವರ್ಷದ ಇದೇ ಅವಧಿಯಲ್ಲಿ 150 ಜಲಾಶಯಗಳಲ್ಲಿ 76.991 ಬಿಸಿಎಂನಷ್ಟು ನೀರು ಲಭ್ಯವಿತ್ತು ಎಂದಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT