ನವದೆಹಲಿ: ಉಕ್ರೇನ್ ರಾಜಧಾನಿ ಕೀವ್‌ನಲ್ಲಿ ಸಿಲುಕಿರುವ ಎಲ್ಲ ಭಾರತೀಯ ವಿದ್ಯಾರ್ಥಿಗಳು ಯುದ್ಧಪೀಡಿತ ದೇಶದಿಂದ ತಮ್ಮ ಮುಂದಿನ ಪ್ರಯಾಣ ಕೈಗೊಳ್ಳಲು ರೈಲ್ವೇ ನಿಲ್ದಾಣಕ್ಕೆ ತೆರಳಬೇಕು ಎಂದು ಉಕ್ರೇನ್‌ನ ಭಾರತೀಯ ರಾಯಭಾರಿ ಕಚೇರಿ ಸೋಮವಾರ ತಿಳಿಸಿದೆ.

ಕೀವ್ ನಗರದಲ್ಲಿ ವೀಕೆಂಡ್ ಕರ್ಫ್ಯೂವನ್ನು ಹಿಂತೆಗೆಯಲಾಗಿದ್ದು, ಅಲ್ಲಿರುವ ಎಲ್ಲ ಭಾರತೀಯ ವಿದ್ಯಾರ್ಥಿಗಳು ನರಗದ ರೈಲು ನಿಲ್ದಾಣಕ್ಕೆ ತೆರಳಬೇಕು. ಸ್ಥಳಾಂತರಕ್ಕಾಗಿ ಉಕ್ರೇನ್ ರೈಲ್ವೆ ವಿಶೇಷ ರೈಲುಗಳನ್ನು ನಿಗದಿ ಮಾಡಿದ್ದು, ತಮ್ಮ ಮುಂದಿನ ಪ್ರಯಾಣವನ್ನು ಆ ಮೂಲಕ ಪ್ರಾರಂಭಿಸಬಹುದು ಎಂದು ರಾಯಭಾರ ಕಚೇರಿ ಟ್ವೀಟ್ ಮಾಡಿದೆ.

‘ಆಪರೇಷನ್ ಗಂಗಾ’ ಕಾರ್ಯಾಚರಣೆಯ ಆರನೇ ವಿಮಾನವು 240 ಭಾರತೀಯರನ್ನು ಕರೆದುಕೊಂಡು ಬುಡಾಪೆಸ್ಟ್‌ನಿಂದ ಹೊರಟಿದೆ. ಇದರೊಂದಿಗೆ ಸ್ಥಳಾಂತರ ಪ್ರಕ್ರಿಯೆಗಳು ಚುರುಕುಗೊಂಡಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಹರ್ಷ ವರ್ದನ್ ಶ್ರಿಂಗ್ಲಾ ಭಾನುವಾರ ಮಾತನಾಡಿ, 'ವಿದ್ಯಾರ್ಥಿಗಳು ಸೇರಿದಂತೆ ಉಕ್ರೇನ್‌ನಲ್ಲಿರುವ ನಾಗರಿಕರನ್ನು ಭಾರತಕ್ಕೆ ಕರೆತರಲು ಸಾಧ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಕೀವ್ ನಗರವೊಂದರಲ್ಲೇ ಸುಮಾರು 2 ಸಾವಿರ ಭಾರತೀಯರು ಇದ್ದು, ಕಳೆದ ಕೆಲವು ದಿನಗಳಿಂದ 2 ಸಾವಿರಕ್ಕೂ ಅಧಿಕ ಜನರನ್ನು ಕರೆತರಲಾಗಿದೆ' ಎಂದು ತಿಳಿಸಿದ್ದರು.

ಫೆ. 24ರಿಂದ ರಷ್ಯಾ ನಡೆಸುತ್ತಿರುವ ಆಕ್ರಮಣದಿಂದಾಗಿ ಉಕ್ರೇನ್ ದೇಶದಲ್ಲಿ 14 ಮಕ್ಕಳು ಸೇರಿದಂತೆ ಒಟ್ಟು 352 ನಾಗರಿಕರು ಇದುವರೆಗೆ ಮೃತಪಟ್ಟಿದ್ದಾರೆ. 116 ಮಕ್ಕಳು ಮತ್ತು 1,684 ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಆಂತರಿಕ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.