ಶ್ರೀನಗರ: ಉಗ್ರರ ದಾಳಿಯಲ್ಲಿ 11 ನಾಗರಿಕರು ಮೃತಪಟ್ಟ ಬಳಿಕ ಜಮ್ಮ ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳಕ್ಕೆ ಶಾಶ್ವತವಾಗಿ ಬ್ರೇಕ್ ಹಾಕಲು ಕೇಂದ್ರ ಚಿಂತನೆ ನಡೆಸಿದಂತೆ ಕಾಣುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದು, ಉಗ್ರವಾದವನ್ನು ಮುಗಿಸಲು ಕಾರ್ಯತಂತ್ರ ರೂಪಿಸುವ ಸಾಧ್ಯತೆ ಇದೆ.

ವಿಶೇಷ ಸ್ಥಾನಮಾನ ರದ್ದಾದ ಬಳಿಕ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಅಮಿತ್ ಶಾ ಜೊತೆ ಗೃಹ ಕಾರ್ಯದರ್ಶಿ ಎ ಕೆ ಭಲ್ಲಾ, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಗುಪ್ತಚರ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಕೇಂದ್ರ ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.

ಅಕ್ಟೋಬರ್ 23 ರಂದು ಶ್ರೀನಗರದಲ್ಲಿ ಶಾ ಅವರು ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದು, ಅವರ ಮೂರು ದಿನಗಳ ಪ್ರವಾಸದ ಮೊದಲ ದಿನ, ನಾಗರಿಕ ಹತ್ಯೆ ಬಳಿಕ ಉಂಟಾಗಿರುವ ಹಠಾತ್ ಪ್ರಚೋದನೆಯನ್ನು ಎದುರಿಸಲು ಮತ್ತು ಉಗ್ರಗಾಮಿಗಳನ್ನು ಮುಗಿಸಲು ಕಾರ್ಯತಂತ್ರವನ್ನು ರೂಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕಾಶ್ಮೀರದಲ್ಲಿ ಕಳೆದ ಎರಡು ವಾರಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರು ಮತ್ತು ಸ್ಥಳೀಯರಲ್ಲದವರು ಸೇರಿದಂತೆ 11 ನಾಗರಿಕರು ಉಗ್ರರಿಂದ ಹತರಾಗಿದ್ದಾರೆ, ಇದು ಕಣಿವೆಯ ಕಾರ್ಮಿಕರಲ್ಲಿ ಭಯ ಮತ್ತು ವಲಸೆಗೆ ಕಾರಣವಾಗಿದೆ. ‘ಭದ್ರತಾ ಸಭೆಯಲ್ಲಿ ಅಲ್ಪಸಂಖ್ಯಾತರು ಮತ್ತು ಸ್ಥಳೀಯರಲ್ಲದ ನಾಗರಿಕರನ್ನು ರಕ್ಷಿಸುವ ಯೋಜನೆಯನ್ನು ರೂಪಿಸುವ ನಿರೀಕ್ಷೆ ಇದೆ’ಎಂದು ಅವರು ಹೇಳಿದರು.

‘ಗೃಹ ಸಚಿವಾಲಯ, ಸಿಎಪಿಎಫ್‌ನ ಹಿರಿಯ ಅಧಿಕಾರಿಗಳು, ಎಲ್ಲಾ ಭದ್ರತೆ ಮತ್ತು ಗುಪ್ತಚರ ಸಂಸ್ಥೆಗಳ ಹಿರಿಯ ಅಧಿಕಾರಿಗಳು, ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜೊತೆಗೆ ಕೇಂದ್ರಾಡಳಿತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಅಧಿಕಾರಿಗಳು ಭದ್ರತಾ ಪರಿಶೀಲನಾ ಸಭೆಯಲ್ಲಿ ಭಾಗವಹಿಸುತ್ತಾರೆ’ಎಂದು ಮೂಲಗಳು ತಿಳಿಸಿವೆ.

ಪಂಚಾಯತ್ ಸದಸ್ಯರು ಹಾಗೂ ರಾಜಕೀಯ ಕಾರ್ಯಕರ್ತರನ್ನು ಉದ್ದೇಶಿಸಿ ಗೃಹ ಸಚಿವರು ಮಾತನಾಡಲಿದ್ದು, ಉಧಂಪುರ್ ಮತ್ತು ಹಂದ್ವಾರದಲ್ಲಿ ಎರಡು ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳ (ಜಿಎಂಸಿ) ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದಾರೆ. ಕಾಶ್ಮೀರದಲ್ಲಿನ ಅಭಿವೃದ್ಧಿ ಕಾರ್ಯಗಳನ್ನು ಸಹ ಷಾ ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 24 ರಂದು ಜಮ್ಮುವಿನ ಭಗವತಿ ನಗರದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಆಯೋಜಿಸಿರುವ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಗೃಹ ಸಚಿವರು ಮಾತನಾಡಲಿದ್ದಾರೆ.

ಇದನ್ನೂ ಓದಿ.. ಕಾಶ್ಮೀರ: 11 ಮಂದಿ ಹತ್ಯೆ ಪ್ರಕರಣ– ಎನ್ಐಎ ತನಿಖೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.