ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ: ಉತ್ತರ ಭಾರತದ ಕೆಲವೆಡೆ ಕಂಪನದ ಅನುಭವ

Published 4 ನವೆಂಬರ್ 2023, 4:59 IST
Last Updated 4 ನವೆಂಬರ್ 2023, 4:59 IST
ಅಕ್ಷರ ಗಾತ್ರ

ನವದೆಹಲಿ: ಶುಕ್ರವಾರ(ನ.3) ರಾತ್ರಿ 11.47ರ ಸುಮಾರಿಗೆ ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದೇ ವೇಳೆ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ಪ್ರದೇಶ ಸೇರಿದಂತೆ ಉತ್ತರ ಭಾರತದ ಕೆಲವೆಡೆ ಭೂಕಂಪನದ ಅನುಭವವಾಗಿದೆ.

128 ಜನರು ಸಾವು: ನೇಪಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 128 ಜನರು ಮೃತಪಟ್ಟಿದ್ದಾರೆ. ಪಶ್ಚಿಮ ನೇಪಾಳದ ಜಜರ್‌ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ 80 ಜನರು ಮೃತಪಟ್ಟು, 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ನೇಪಾಳದ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಭೂಕಂಪನದ ಕೇಂದ್ರ ಬಿಂದು ಜಾಜರ್‌ಕೋಟ್ ಜಿಲ್ಲೆಯ ಲಾಮಿಡಾಂಡಾದಲ್ಲಿತ್ತು. ಇದು ಕಠ್ಮಂಡುವಿನಿಂದ ಪಶ್ಚಿಮಕ್ಕೆ 331 ಕಿ.ಮೀ ದೂರದಲ್ಲಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT