ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ರಾಡ್‌ನಿಂದ ಹಲ್ಲೆ, 25 ವರ್ಷದ ವಿದ್ಯಾರ್ಥಿನಿ ಬರ್ಬರ ಹತ್ಯೆ

Published 28 ಜುಲೈ 2023, 10:03 IST
Last Updated 28 ಜುಲೈ 2023, 10:03 IST
ಅಕ್ಷರ ಗಾತ್ರ

ನವದೆಹಲಿ: ರಾಡ್‌ನಿಂದ ಹಲ್ಲೆ ನಡೆಸಿ ಕಾಲೇಜು ವಿದ್ಯಾರ್ಥಿನಿಯೊಬ್ಬರನ್ನು ಹತ್ಯೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ದೆಹಲಿಯ ಮಾಳವೀಯ ನಗರದ ಅರಬಿಂದೋ ಕಾಲೇಜು ಬಳಿಯ ಉದ್ಯಾನವನದಲ್ಲಿ ಈ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿನಿ ಕಮಲಾ ನೆಹರು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಸ್ನೇಹಿತನೊಂದಿಗೆ ಉದ್ಯಾನವನಕ್ಕೆ ತೆರಳಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ 28 ವರ್ಷದ ಆರೋಪಿ ಇರ್ಫಾನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಮಾಳವೀಯಾ ನಗರದ ಅರಬಿಂದೋ ಕಾಲೇಜು ಬಳಿ 25 ವರ್ಷದ ಯುವತಿಯ ಶವ ಪತ್ತೆಯಾಗಿದೆ. ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಹಲ್ಲೆ ನಡೆಸಲಾಗಿದ್ದು, ತಲೆಗೆ ಬಲವಾದ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಚಂದನ್ ಚೌಧರಿ ತಿಳಿಸಿದ್ದಾರೆ.

ಇರ್ಫಾನ್ ಮೃತ ಯುವತಿಯೊಂದಿಗೆ ಮದುವೆಯಾಗಲು ಬಯಸಿದ್ದ. ಆದರೆ, ಯುವತಿ ಮನೆಯವರು ಮದುವೆಗೆ ನಿರಾಕರಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಮಾಳವೀಯಾ ನಗರದಂತಹ ಐಷಾರಾಮಿ ಪ್ರದೇಶದಲ್ಲಿ, ರಾಡ್‌ನಿಂದ ಹೊಡೆದು ಯುವತಿಯನ್ನು ಹತ್ಯೆ ಮಾಡಲಾಗಿದೆ. ದೆಹಲಿ ಅತ್ಯಂತ ಅಸುರಕ್ಷಿತವಾಗಿದೆ’ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲೀವಾಲ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT