ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟ: ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ, ಈ ವರ್ಷದ 24ನೇ ಪ್ರಕರಣ

Published 13 ಸೆಪ್ಟೆಂಬರ್ 2023, 10:29 IST
Last Updated 13 ಸೆಪ್ಟೆಂಬರ್ 2023, 10:29 IST
ಅಕ್ಷರ ಗಾತ್ರ

ಕೋಟ: ರಾಜಸ್ಥಾನದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ಕೋಟದಲ್ಲಿ ಮಂಗಳವಾರ ರಾತ್ರಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಇವರು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (NEET) ತರಬೇತಿ ಪಡೆಯುತ್ತಿದ್ದರು.

ಜಾರ್ಖಂಡ್‌ನ ರಾಂಚಿ ಮೂಲದವರಾದ ಇವರು ಮಂಗಳವಾರ ರಾತ್ರಿ ಹಾಸ್ಟೆಲ್‌ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪ್ರಕರಣದ ಮೂಲಕ ಈ ವರ್ಷ ಇಲ್ಲಿಯವರೆಗೆ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಆತ್ಮಹತ್ಯೆಗೂ ಮೊದಲು ಕೊಠಡಿ ಬಾಗಿಲು ಹಾಕಿಕೊಂಡಿದ್ದರಿಂದ ಮತ್ತೊಬ್ಬ ವಿದ್ಯಾರ್ಥಿನಿ ಅನುಮಾನಗೊಂಡು ಹಾಸ್ಟೆಲ್ ವಾರ್ಡನ್‌ಗೆ ಮಾಹಿತಿ ನೀಡಿದರು. ಬಾಗಿಲು ತೆರೆದು ನೋಡಿದಾಗ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿರುವುದು ಪತ್ತೆಯಾಯಿತು.

ವಿದ್ಯಾರ್ಥಿನಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದ್ದು, ಆಕೆಯ ಪೋಷಕರಿಗೂ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT