ಬೆಂಗಳೂರು: ಶಾಲಾ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಜಾಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ಮೇಲ್ಮನವಿ ಸಲ್ಲಿಸಲಾಗಿದೆ.

ಹಿಜಾಬ್ ಪರವಾಗಿ ಕಾನೂನು ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿ ನಿಬಾ ನಾಜ್ ಅವರು ವಕೀಲರಾದ ಅನಸ್ ತನ್ವೀರ್ ಅವರ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

‘ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ನಿರ್ದೇಶಿಸಬೇಕು' ಎಂಬ ಕೋರಿಕೆಯ ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿರುವ ಹೈಕೋರ್ಟ್, ‘ಈ ವಿಷಯವನ್ನು ದೇಶದಾದ್ಯಂತ ವಿವಾದದ ವಿಷಯವನ್ನಾಗಿ ಮಾಡಿರುವ ಹಿಂದೆ ಕಾಣದ ಕೈಗಳು ಅಡಗಿವೆ’ ಎಂಬ ಬಲವಾದ ಸಂಶಯ ವ್ಯಕ್ತಪಡಿಸಿದೆ.

ಇದನ್ನೂ ಓದಿ:LIVE | ಹಿಜಾಬ್ ನಿರ್ಬಂಧದ ಆದೇಶ ಎತ್ತಿಹಿಡಿದ ಹೈಕೋರ್ಟ್: ತೀರ್ಪು ಅಸಂವಿಧಾನಿಕ ಎಂದ ಸಿಎಫ್ಐ Live

ಈ ಕುರಿತಂತೆ ಕಾಯ್ದಿರಿಸಲಾಗಿದ್ದ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ಮಂಗಳವಾರ ಬೆಳಗ್ಗೆ ಪ್ರಕಟಿಸಿದೆ.

‘ಹಿಜಾಬ್ ಇಸ್ಲಾಂನ ಅತ್ಯಾವಶ್ಯಕ ಧಾರ್ಮಿಕ ಆಚರಣೆ (ಇಆರ್‌ಪಿ) ಎಂಬುದನ್ನು ಸಾಬೀತುಪಡಿಸುವಲ್ಲಿ ಅರ್ಜಿದಾರರು ವಿಫಲವಾಗಿದ್ದಾರೆ. ಅಂತೆಯೇ ಇಸ್ಲಾಂ ಧರ್ಮದ ಅನುಸಾರ ಹಿಜಾಬ್ ಅತ್ಯಾವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಕುರಾನಿನಲ್ಲಿ ಯಾವುದೇ ಅಧಿಕೃತ ಆಧಾರವಿಲ್ಲ’ ಎಂದು ನ್ಯಾಯಪೀಠದ ಮೂವರೂ ಸದಸ್ಯರು ಸಂಪೂರ್ಣ ಸಹಮತದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು...

ಹಿಜಾಬ್: ವಕೀಲರ ಜತೆ ಚರ್ಚಿಸಿ ಮೇಲ್ಮನವಿ ಬಗ್ಗೆ ನಿರ್ಧಾರ–ವಿದ್ಯಾರ್ಥಿನಿಯರು

ಹಿಜಾಬ್ ವಿವಾದ ಕುರಿತ ವಿಚಾರಣೆ ಸುಪ್ರೀಂನಲ್ಲಿ ಬಾಕಿ ಇದೆ: ರಣದೀಪ್ ಸುರ್ಜೇವಾಲ

ಹಿಜಾಬ್ ವಿವಾದ: ಎಲ್ಲರೂ ನ್ಯಾಯಾಲಯದ ತೀರ್ಪು ಪಾಲಿಸಬೇಕು- ಬಸವರಾಜ ಬೊಮ್ಮಾಯಿ

ನ್ಯಾಯಾಲಯದ ತೀರ್ಪನ್ನು ಎಲ್ಲರೂ ಪಾಲಿಸಬೇಕು: ಸತೀಶ ಜಾರಕಿಹೊಳಿ

ಹಿಜಾಬ್ ವಿವಾದ: ಹೈಕೋರ್ಟ್ ತೀರ್ಪಿನ ಬಗ್ಗೆ ಒಮರ್ ಅಬ್ದುಲ್ಲಾ, ಮುಫ್ತಿ ಅಸಮಾಧಾನ

ಹಿಜಾಬ್: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಗೆ- ಶೀಘ್ರ ನಿರ್ಧಾರ ಎಂದ ವಕೀಲರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.