ಚೆನ್ನೈ: ‘ಅಣ್ಣಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸುವ ಸಲುವಾಗಿ ಪಕ್ಷದ ಮಹಿಳಾ ಘಟಕದ ನೇತೃತ್ವದಲ್ಲಿ ‘ನ್ಯಾಯ ರ್ಯಾಲಿ’ ನಡೆಯಲಿದೆ’ ಎಂದು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

‘ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗಳು ಡಿಎಂಕೆ ಪಕ್ಷದ ಸದಸ್ಯರಾಗಿದ್ದು, ಸತ್ಯವನ್ನು ಮರೆಮಾಚುವ ಯತ್ನ ನಡೆಯುತ್ತಿದೆ’ ಎಂದು ಅಣ್ಣಾಮಲೈ ಎಕ್ಸ್ನಲ್ಲಿ ಆರೋಪಿಸಿದ್ದಾರೆ.

‘ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಜನವರಿ 3ರಂದು ಉಮಾರತಿ ರಾಜನ್ ಅವರ ನೇತೃತ್ವದಲ್ಲಿ ಮಧುರೈನಿಂದ ಚೆನ್ನೈವರೆಗೆ ನ್ಯಾಯ ರ್ಯಾಲಿ ನಡೆಯಲಿದೆ. ರ್ಯಾಲಿ ಪೂರ್ಣಗೊಂಡ ನಂತರ ಮಹಿಳಾ ಘಟಕದ ಬೇಡಿಕೆಗಳ ಕುರಿತು ರಾಜ್ಯಪಾಲರಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 23ರಂದು ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ 19 ವರ್ಷದ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಗಳಿಬ್ಬರು ಲೈಂಗಿಕ ದೌರ್ಜನ್ಯ ನಡೆಸಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ ಒಬ್ಬನನ್ನು ಬಂಧಿಸಲಾಗಿದೆ.

ಏತನ್ಮಧ್ಯೆ, ಆರೋಪಿಗಳು ಡಿಎಂಕೆ ಸದಸ್ಯರು ಎಂಬ ಬಿಜೆಪಿ ಆರೋಪವನ್ನು ಪಕ್ಷ (ಡಿಎಂಕೆ ) ಅಲ್ಲಗೆಳೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.