ಲಖನೌ: ಒಡಿಶಾದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ, ಮೂರು ದಿನಗಳ ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣದ ಕುರಿತು ಆಕ್ರೋಶ ವ್ಯಕ್ತವಾಗುತ್ತಿರುವ ಹೊತ್ತಿನಲ್ಲಿಯೇ ಇಂಥದ್ದೇ ಘಟನೆ ಗ್ರೇಟರ್ ನೊಯಿಡಾದ ಶಾರದಾ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ದಂತ ವೈದ್ಯಕೀಯ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಶಿಕ್ಷಕರು ತನಗೆ ಕಿರುಕುಳ ನೀಡಿದ್ದಾರೆ ಎಂದು ಆಕೆ ಮರಣಪತ್ರದಲ್ಲಿ ಬರೆದಿದ್ದಾರೆ. ಗ್ರೇಟರ್ ನೊಯಿಡಾದಲ್ಲಿ ಈ ಖಾಸಗಿ ವಿಶ್ವವಿದ್ಯಾಲಯವಿದೆ.

‘ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಪ್ರಕರಣದ ತನಿಖೆಗೆ ವಿಶ್ವವಿದ್ಯಾಲಯವು ಉನ್ನತ ಮಟ್ಟದ ಸಮಿತಿಯೊಂದನ್ನೂ ರಚಿಸಿದೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಶಿಕ್ಷಕರನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಸಂತ್ರಸ್ತೆಯ ಪೋಷಕರೊಂದಿಗೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಶನಿವಾರ ಮಾತುಕತೆ ನಡೆಸಿತ್ತು. ಪ್ರಕರಣದ ಸಂಬಂಧ ಕ್ರಮ ಕೈಗೊಳ್ಳಲು ಐದು ದಿನಗಳವರೆಗೆ ಅವಕಾಶ ನೀಡಿ ಎಂದು ಪೋಷಕರಲ್ಲಿ ಮಂಡಳಿ ಮನವಿ ಮಾಡಿಕೊಂಡಿತ್ತು ಎನ್ನಲಾಗಿದೆ. ಪ್ರಕರಣದ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಸಂತ್ರಸ್ತೆ ಹೇಳಿದ್ದೇನು?

‘ಇಬ್ಬರು ಪ್ರಾಧ್ಯಾಪಕರು ಮಾನಸಿಕವಾಗಿ ನನಗೆ ಹಿಂಸೆ ನೀಡಿದ್ದಾರೆ. ನನ್ನನ್ನು ಅವಮಾನಿಸಿದ್ದಾರೆ. ಅವಮಾನ ತಾಳಲಾರದೆ ಬಹಳ ದಿನಗಳಿಂದ ನಾನು ಖಿನ್ನತೆಗೆ ಒಳಗಾಗಿದ್ದೇನೆ. ನನಗಾದ ಹಿಂಸೆಯೇ ಆ ಇಬ್ಬರಿಗೂ ಆಗಬೇಕು. ಇನ್ನಷ್ಟು ದಿನ ನಾನು ಬದುಕಲಾರೆ’ ಎಂದು ವಿದ್ಯಾರ್ಥಿನಿಯು
ಮರಣಪತ್ರದಲ್ಲಿ ಬರೆದಿದ್ದಾರೆ.

ಪರೀಕ್ಷೆಯಲ್ಲಿ ಅನುತ್ತೀರ್ಣಗೊಳಿಸುವುದಾಗಿ ನನ್ನ ಮಗಳಿಗೆ ಆ ಪ್ರಾಧ್ಯಾಪಕರು ಬೆದರಿಕೆ ಒಡ್ಡಿದ್ದರು
ಮೃತ ವಿದ್ಯಾರ್ಥಿನಿಯ ತಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.